ಮುಸ್ಲಿಂ ಯುವತಿಯನ್ನು ವಿವಾಹವಾದ ಕಾರಣ ಹಿಂದೂ ಯುವಕನ ಹತ್ಯೆ ಪ್ರಕರಣ

ಕೊಪ್ಪಳ – ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಹಿಂದೂ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ವಿವಾಹವಾದರೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. “ಮುಂದಿನ ದಿನಗಳಲ್ಲಿ ಇಂತಹ ಒಂದು ಅಭಿಯಾನವನ್ನೂ ಪ್ರಾರಂಭಿಸಲಾಗುವುದು” ಎಂದೂ ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕನನ್ನು ಹತ್ಯೆ ಮಾಡಿದ್ದರು. ಹತನಾದ ಆ ಯುವಕನ ಕುಟುಂಬವನ್ನು ಭೇಟಿ ಮಾಡಿದಾಗ ಯತ್ನಾಳ್ ಅವರು ಈ ಹೇಳಿಕೆ ನೀಡಿದರು. ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಹೊರಹಾಕಲಾಗಿದೆ.
ಶಾಸಕ ಯತ್ನಾಳ್ ಅವರು ಮಾಧ್ಯಮಗಳ ಮುಂದೆ ಮಾತನಾಡಿ, ಮಸೀದಿಯ ಮುಂದೆ ಗುಂಪೊಂದು ಓರ್ವ ಹಿಂದೂ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದಾಗ, ಯಾರೊಬ್ಬರೂ ಆ ಆಕ್ರಮಣವನ್ನು ನಿಲ್ಲಿಸಲು ಮುಂದಾಗಲಿಲ್ಲ. ‘ಲವ್ ಜಿಹಾದ್’ ಪ್ರಕರಣಗಳಲ್ಲಿ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುತ್ತದೆ. ಈ ಸರ್ಕಾರ ಕೇವಲ ಮುಸ್ಲಿಮರ ಹಿತಾಸಕ್ತಿಗಳಿಗೆ ಮಾತ್ರ ಕೆಲಸ ಮಾಡುತ್ತದೆ. ಈ ವಿಷಯವನ್ನು ನಾನು ಖಂಡಿತವಾಗಿ ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.
ಏನಿದು ಪ್ರಕರಣ?
26 ವರ್ಷದ ಹಿಂದೂ ಯುವಕ ಗವಿಸಿದ್ದಪ್ಪ ನಾಯಕ ಮತ್ತು ಒಬ್ಬ ಮುಸ್ಲಿಂ ಯುವತಿಯ ನಡುವೆ ಪ್ರೇಮ ಸಂಬಂಧವಿತ್ತು. ಈ ಕಾರಣಕ್ಕಾಗಿ ಆಗಸ್ಟ್ 3 ರಂದು ಮಸೀದಿಯ ಮುಂದೆ ಚಾಕುವಿನಿಂದ ಇರಿದು ಆತನನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು 3 ಮುಸ್ಲಿಂ ಯುವಕರನ್ನು ಬಂಧಿಸಿದ್ದು, ಮುಖ್ಯ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!