ಕಾಶ್ಮೀರಿ ಹಿಂದೂ ಸರಳಾ ಭಟ್ ಹತ್ಯೆ ಪ್ರಕರಣ: 35 ವರ್ಷಗಳ ನಂತರ ಕ್ರಮ!

ಶ್ರೀನಗರ – 1990ರಲ್ಲಿ ಕಾಶ್ಮೀರಿ ಹಿಂದೂ ಮಹಿಳೆ ಸರಳಾ ಭಟ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 12 ರಂದು ವಿಶೇಷ ತನಿಖಾ ಸಂಸ್ಥೆ ಶ್ರೀನಗರದ 8 ಸ್ಥಳಗಳ ಮೇಲೆ ದಾಳಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ ಸಂಘಟನೆಯ ಮುಖ್ಯಸ್ಥ ಯಾಸಿನ್ ಮಲಿಕ್ ಅವರ ಮೈಸಮಾ ಪ್ರದೇಶದ ಮನೆ ಮತ್ತು ಅವರ ಸಹಚರರು ಅಡಗಿದ್ದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. 1990ರ ದಶಕದಲ್ಲಿ ಜಿಹಾದಿ ಭಯೋತ್ಪಾದಕರು ಕಾಶ್ಮೀರಿ ಹಿಂದೂಗಳ ನರಮೇಧ ಪ್ರಕರಣದ ಕುರಿತು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರು ಇತ್ತೀಚೆಗೆ ಈ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ಪುನರಾರಂಭಿಸಲು ನಿರ್ಧರಿಸಿದ್ದರು. ಈ ನಿರ್ಧಾರದ ಪ್ರಕಾರ, ತನಿಖಾ ಸಂಸ್ಥೆ ಈ ಕ್ರಮವನ್ನು ಪ್ರಾರಂಭಿಸಿದೆ.
ಸರಳಾ ಭಟ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು!

ದಾದಿಯಾಗಿ ಕೆಲಸ ಮಾಡುತ್ತಿದ್ದ ಸರಳಾ ಭಟ್ ಅವರನ್ನು 1990 ರಲ್ಲಿ ಶೇರ್-ಎ-ಕಾಶ್ಮೀರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಹಾಸ್ಟೆಲ್‌ನಿಂದ ಅಪಹರಿಸಲಾಗಿತ್ತು. ಮರುದಿನ, ಅವರ ದೇಹವು ಗುಂಡುಗಳಿಂದ ಜರ್ಜರಿತವಾಗಿ ಶ್ರೀನಗರದ ಸೌರಾ ಪ್ರದೇಶದಲ್ಲಿ ಪತ್ತೆಯಾಗಿತ್ತು. ಈ ಪ್ರಕರಣವನ್ನು ಆರಂಭದಲ್ಲಿ ನಿಗೀನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು. ನಂತರ ಅದನ್ನು ವಿಶೇಷ ತನಿಖಾ ಸಂಸ್ಥೆಗೆ ವರ್ಗಾಯಿಸಲಾಯಿತು.
ಸಂಪಾದಕೀಯ ನಿಲುವು
|
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!