ಸ್ಪೀಕರ್ ಅವರಿಂದ 3 ಸದಸ್ಯರ ಸಮಿತಿ ಸ್ಥಾಪನೆ

ನವದೆಹಲಿ – ಅಲಹಾಬಾದ್ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ವಿರುದ್ಧದ ದೋಷಾರೋಪಣೆಯ ಪ್ರಸ್ತಾವವನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ತನಿಖೆಗಾಗಿ 3 ಸದಸ್ಯರ ಸಮಿತಿಯನ್ನು ಘೋಷಿಸಿದ್ದಾರೆ. ಈ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಉಚ್ಚ ನ್ಯಾಯಾಲಯದ ತಲಾ ಒಬ್ಬ ನ್ಯಾಯಾಧೀಶರು ಮತ್ತು ಒಬ್ಬ ಕಾನೂನು ತಜ್ಞರು ಇರುತ್ತಾರೆ. ತನಿಖಾ ಸಮಿತಿಯ ವರದಿ ಬರುವವರೆಗೂ ದೋಷಾರೋಪಣೆಯ ಪ್ರಸ್ತಾವ ಬಾಕಿ ಇರುತ್ತದೆ. ಈ ಪ್ರಸ್ತಾವದಲ್ಲಿ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಲಾಗಿದೆ.
ಈ ವರ್ಷ ಮಾರ್ಚ್ 14 ರಂದು ನ್ಯಾಯಮೂರ್ತಿ ವರ್ಮಾ ಅವರ ಮನೆಯ ಅತಿಥಿಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯನ್ನು ನಂದಿಸಿದ ನಂತರ ಅಗ್ನಿಶಾಮಕ ದಳದವರಿಗೆ ಸುಟ್ಟುಹೋದ 500 ರೂಪಾಯಿ ನೋಟುಗಳು ಗೋಣಿಚೀಲಗಳಲ್ಲಿ ತುಂಬಿರುವುದು ಕಂಡುಬಂದಿತ್ತು. ಈ ಘಟನೆಯ ವಿಡಿಯೋ ವೈರಲ್ ಆದ ನಂತರ ತನಿಖೆಗೆ ಒತ್ತಾಯಿಸಲಾಗಿತ್ತು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ