
ಶಿಮ್ಲಾ – ಹಿಮಾಚಲ ಪ್ರದೇಶದ ಹೆಚ್ಚಿನ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ ಮತ್ತು ರಾಜ್ಯದ ಕೋಟಖಾಯಿ ಬೆಟ್ಟಗಳಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಕಾಲುವೆಗಳಲ್ಲಿ ಮಣ್ಣಿನ ರಾಶಿ ಶೇಖರಣೆ ಆಗಿದೆ. ಈ ಮೇಘಸ್ಫೋಟದಿಂದಾಗಿ, ತರಾಯಿಯಲ್ಲಿ ನಿರ್ಮಿಸಲಾದ ಪೆಟ್ರೋಲ್ ಪಂಪ್ ಮತ್ತು 6ಕ್ಕೂ ಹೆಚ್ಚು ವಾಹನಗಳು ಮಣ್ಣಿನಲ್ಲಿ ಹೂತುಹೋಗಿವೆ. ಕುಲ್ಲು ಮತ್ತು ಶಿಮ್ಲಾದಲ್ಲಿಯೂ ಮೇಘಸ್ಫೋಟ ಸಂಭವಿಸಿದ್ದು, ನದಿ ಮತ್ತು ಹಳ್ಳಗಳು ಉಕ್ಕಿ ಹರಿಯುತ್ತಿವೆ. ‘ಹಿಮಾಚಲ ವಿಪತ್ತು ನಿರ್ವಹಣಾ ಪ್ರಾಧಿಕಾರ’ದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ರಾಜ್ಯದಲ್ಲಿ 323 ರಸ್ತೆಗಳನ್ನು ಬಂದ್ ಮಾಡಲಾಗಿದೆ. ಹಠಾತ್ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿದ್ದ 4 ಜನರನ್ನು ಸೇನೆಯು ರಕ್ಷಿಸಿದೆ.
ಉತ್ತರಪ್ರದೇಶದ 11 ಜಿಲ್ಲೆಗಳಲ್ಲಿ ಪ್ರವಾಹ: ಶಾಲೆ-ಕಾಲೇಜು ಬಂದ್!
ಉತ್ತರಪ್ರದೇಶದ 11 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಹವಾಮಾನ ಇಲಾಖೆಯು ರಾಜ್ಯದ 24 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯನ್ನು ಮುನ್ಸೂಚಿಸಿದೆ. ಆಗಸ್ಟ್ 13 ರ ರಾತ್ರಿ ಲಕ್ಷ್ಮಣಪುರಿಯಲ್ಲಿ ಭಾರೀ ಮಳೆಯಾಗಿದೆ. ಲಕ್ಷ್ಮಣಪುರಿ ಸೇರಿದಂತೆ ಪ್ರವಾಹ ಪೀಡಿತ ಇತರ ಜಿಲ್ಲೆಗಳಲ್ಲಿ ಎಲ್ಲಾ ಸರಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein