
ಇಸ್ಲಾಮಾಬಾದ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಾಗರಿಕರು ವಿವಿಧೆಡೆ ಅಜಾಗರೂಕತೆಯಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ 3 ಮಂದಿ ಸಾವನ್ನಪ್ಪಿದ್ದು, 64 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ 8 ವರ್ಷದ ಬಾಲಕಿಯೂ ಸೇರಿದ್ದಾಳೆ. ಪಾಕಿಸ್ತಾನದಲ್ಲಿ ಯಾವುದೇ ಸಂತೋಷದ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವುದು ಒಂದು ಸಂಪ್ರದಾಯವಾಗಿದೆ. ಪೊಲೀಸರು, ಲಿಯಾಕತಾಬಾದ, ಕೊರಂಗಿ, ಲಿಯಾರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಗಳು ನಡೆದಿವೆ ಎಂದು ತಿಳಿಸಿದ್ದಾರೆ. ಅಜೀಜಾಬಾದನಲ್ಲಿ ಒಂದು ಅಮಾಯಕ ಬಾಲಕಿಗೆ ಗುಂಡು ತಗುಲಿದರೆ, ಕೊರಂಗಿ ಪ್ರದೇಶದಲ್ಲಿ ಸ್ಟೀಫನ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಅವರಿಂದ ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
2024 ರಲ್ಲಿಯೂ ಇಂತಹ ಗುಂಡಿನ ದಾಳಿಯಲ್ಲಿ 95 ಜನರು ಗಾಯಗೊಂಡಿದ್ದರೆ, 2023 ರಲ್ಲಿ 80 ಜನರು ಗಾಯಗೊಂಡಿದ್ದರು. ಜನವರಿ 1, 2025 ರಂದು ಕರಾಚಿಯಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಗುಂಡು ಹಾರಿಸಿದ್ದರಿಂದ 29 ಜನರು ಗಾಯಗೊಂಡಿದ್ದರು.
🇵🇰 Pakistan’s “Independence Day”
➡️ 3 dead (incl. 8-yr-old), 64 injured in aerial firing.
Past tolls from same madness: 95 (2024) | 80 (2023) | 29 (New Year 2025, Karachi).
Blood-soaked “celebrations” of a demonic mindset.
PC: @trunicle pic.twitter.com/aTRavSIN88
— Sanatan Prabhat (@SanatanPrabhat) August 14, 2025
ಸಂಪಾದಕೀಯ ನಿಲುವುಇಂತಹ ರಾಕ್ಷಸೀಯ ರೀತಿಯಲ್ಲಿ ಹಬ್ಬ ಆಚರಿಸುವವರ ಮನಃಸ್ಥಿತಿ ಇದರಿಂದ ತಿಳಿಯುತ್ತದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation