
ಚಂಡೀಗಢ – ಹಿಸಾರ್ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸುಮಾರು 2 ಸಾವಿರದ 500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮೇ 16ರಂದು ಹಿಸಾರ್ ಪೊಲೀಸರ ವಿಶೇಷ ತನಿಖಾ ತಂಡವು ಆಕೆಯನ್ನು ಗೂಢಚಾರಿಕೆಯ ಆರೋಪದ ಮೇಲೆ ಬಂಧಿಸಿತ್ತು. ಜ್ಯೋತಿ ಮಲ್ಹೋತ್ರಾ ಗೂಢಚಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದಕ್ಕೆ ದೃಢವಾದ ಪುರಾವೆಗಳು ಲಭಿಸಿವೆ ಎಂದು ಈ ಚಾರ್ಜ್ ಶೀಟ್‌ನಲ್ಲಿ ಹೇಳಲಾಗಿದೆ.
ಜ್ಯೋತಿ ಮಲ್ಹೋತ್ರಾ ಬಹಳ ಸಮಯದಿಂದ ಪಾಕಿಸ್ತಾನಿ ಏಜೆಂಟ್‌ಗಳಿಗೆ ಸೂಕ್ಷ್ಮ ಮಾಹಿತಿಯನ್ನು ಒದಗಿಸುತ್ತಿದ್ದರು ಮತ್ತು ಅವರೊಂದಿಗೆ ನಿಯಮಿತ ಸಂಪರ್ಕದಲ್ಲಿದ್ದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಚಾರ್ಜ್ ಶೀಟ್‌ನಲ್ಲಿ, ಶಾಕೀರ್, ಹಸನ್ ಅಲಿ ಮತ್ತು ನಾಸಿರ್ ಧಿಲ್ಲನ್ ಎಂಬ ‘ಐ.ಎಸ್.ಐ.’ ನ ಭಯೋತ್ಪಾದಕರೊಂದಿಗೆ ಆಕೆ ಸಂಬಂಧ ಹೊಂದಿದ್ದಳು ಎಂದೂ ಹೇಳಲಾಗಿದೆ. ಪೊಲೀಸರ ಮೂಲಗಳ ಪ್ರಕಾರ, ಆಕೆ ನವೆಂಬರ್ 2023 ರಿಂದ ಪಾಕಿಸ್ತಾನಿ ಹೈಕಮಿಷನ್‌ನ ಉದ್ಯೋಗಿ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ದಾನಿಶ್ ಜೊತೆ ಸಂಪರ್ಕದಲ್ಲಿದ್ದಳು. ಗೂಢಚಾರಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಭಾರತವು ಮೇ 13ರಂದು ದಾನಿಶ್ ಅವರನ್ನು ಗಡೀಪಾರು ಮಾಡಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!