
ಪೇಶಾವರ (ಖೈಬರ್ ಪಖ್ತುನ್‌ಖ್ವಾ) – ಇಲ್ಲಿ ಪ್ರವಾಹದಿಂದ ಭಾರಿ ವಿನಾಶ ಸಂಭವಿಸಿದ್ದು, 1 ಸಾವಿರಕ್ಕೂ ಹೆಚ್ಚು ಜನರು ಕೊಚ್ಚಿ ಹೋಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ. ಖೈಬರ್ ಪಖ್ತುನ್‌ಖ್ವಾದ ಮಾಹಿತಿ ಸಂಯೋಜಕ ಇಖ್ತಿಯಾರ್ ವಲಿ ಖಾನ್ ಅವರು ಪರಿಸ್ಥಿತಿಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರವಾಹದ ನೀರಿನಲ್ಲಿ ಕೊಚ್ಚಿಬಂದ ಕಲ್ಲುಗಳು ಟ್ರಕ್‌ಗಿಂತಲೂ ದೊಡ್ಡವು!
ಇಲ್ಲಿನ ಹಲವು ಹಳ್ಳಿಗಳು ನಾಶವಾಗಿವೆ ಎಂದು ವಲಿ ಹೇಳಿದ್ದಾರೆ. ಬುನೇರ್‌ನ ಚಘರ್ಜಿ ಪ್ರದೇಶದಲ್ಲಿ ಭಾರಿ ಹಾನಿಯಾಗಿದೆ. ಬಶೋನಿ ಎಂಬ ಗ್ರಾಮ ನಕ್ಷೆಯಿಂದ ಸಂಪೂರ್ಣವಾಗಿ ಅಳಿಸಿಹೋಗಿದೆ. ಪ್ರವಾಹದ ನೀರಿನಲ್ಲಿ ಕೊಚ್ಚಿಬಂದ ಕಲ್ಲುಗಳು ಟ್ರಕ್‌ಗಳಿಗಿಂತಲೂ ದೊಡ್ಡದಾಗಿದ್ದವು. 600ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ; ಆದರೆ ಇನ್ನೂ ಅನೇಕರ ಮಾಹಿತಿ ಲಭ್ಯವಾಗಿಲ್ಲ.
ಪಾಕಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಜೂನ್ 26 ರಿಂದ ಇಲ್ಲಿಯವರೆಗೆ ಪಾಕಿಸ್ತಾನ ಮತ್ತು ಅದರ ನಿಯಂತ್ರಣದಲ್ಲಿರುವ ಪ್ರಾಂತ್ಯಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 657 ಜನರು ಸಾವನ್ನಪ್ಪಿದ್ದು, 929 ಜನರು ಗಾಯಗೊಂಡಿದ್ದಾರೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid