ಟ್ರಂಪ್ ಅವರಿಂದ ನಾರ್ವೆಯ ಹಣಕಾಸು ಸಚಿವರಿಗೆ ಬೆದರಿಕೆ!

ವಾಷಿಂಗ್ಟನ (ಅಮೆರಿಕ) – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುರೋಪಿಯನ್ ರಾಷ್ಟ್ರವಾದ ನಾರ್ವೆಯ ಮೇಲೆ ಒತ್ತಡ ಹೇರಿ, ತಮಗೆ ಶಾಂತಿ ನೊಬೆಲ್ ಪ್ರಶಸ್ತಿ ನೀಡುವಂತೆ ಹೇಳಿದ್ದಾರೆ. ನಾರ್ವೆಯ ಹಣಕಾಸು ಸಚಿವ ಜೆನ್ಸ್ ಸ್ಟೋಲ್ಟೆನ್ ಬರ್ಗ್ ಅವರಿಗೆ ದೂರವಾಣಿ ಕರೆ ಮಾಡಿದ ಟ್ರಂಪ್, ‘ನೊಬೆಲ್ ಪ್ರಶಸ್ತಿ ನೀಡದಿದ್ದರೆ ನಾರ್ವೆಯ ಮೇಲೆ ಶೇ 15 ರಷ್ಟು ಹೆಚ್ಚುವರಿ ಆಮದು ತೆರಿಗೆ ವಿಧಿಸುತ್ತೇನೆ’ ಎಂದು ಹೇಳಿದ್ದಾರೆ. ನಾರ್ವೆಯ ಆರ್ಥಿಕ ಮೂಲಗಳಿಗೆ ಸಂಬಂಧಿಸಿದ ‘ದಾಹಗೆನ್ಸ್ ನೆಹರಿಂಗಸ್ಲಿವ್’ ಎಂಬ ಪತ್ರಿಕೆ ಈ ಸುದ್ದಿಯನ್ನು ಪ್ರಕಟಿಸಿದೆ.
1. ಪತ್ರಿಕೆಯ ವರದಿಯ ಪ್ರಕಾರ, ಟ್ರಂಪ್ ಅವರು ಸ್ಟೋಲ್ಟೆನ್ ಬರ್ಗ್ ಅವರಿಗೆ, ‘ನಾನು ಭಾರತ-ಪಾಕಿಸ್ತಾನ ಹಾಗೂ ಕಾಂಬೋಡಿಯಾ-ಥೈಲ್ಯಾಂಡ್ ನಡುವಿನ ಅನೇಕ ಯುದ್ಧಗಳನ್ನು ನಿಲ್ಲಿಸಿದ್ದೇನೆ’ ಎಂದು ತಿಳಿಸಿದ್ದಾರೆ.
2. ಇತ್ತೀಚೆಗೆ, ಇಸ್ರೇಲ್ ಮತ್ತು ಪಾಕಿಸ್ತಾನ ದೇಶಗಳು ಟ್ರಂಪ್ ಅವರಿಗೆ ನೊಬೆಲ್ ಪ್ರಶಸ್ತಿಗಾಗಿ ನಾಮನಿರ್ದೇಶನ ಮಾಡಿರುವುದು ಕೂಡ ಬೆಳಕಿಗೆ ಬಂದಿತ್ತು.
3. ಟ್ರಂಪ್ ಅವರು ತಮ್ಮ ಮೊದಲ ಅಧಿಕಾರಾವಧಿಯಲ್ಲೂ ನೊಬೆಲ್ ಪ್ರಶಸ್ತಿಗಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದರು. ಅಕ್ಟೋಬರ್ 2024 ರಲ್ಲಿ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಮಯದಲ್ಲಿಯೂ ಟ್ರಂಪ್ ಅವರು, ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರು ಏನನ್ನೂ ಮಾಡದಿದ್ದರೂ ಅವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ಕೋಪದಿಂದ ಹೇಳಿದ್ದರು.
4. ಆಗಸ್ಟ್ ಆರಂಭದಲ್ಲಿ, ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕೆವಿನ್ ಲೆವಿಟ್ ಕೂಡ, ನೊಬೆಲ್ ಪ್ರಶಸ್ತಿ ಸಮಿತಿಯು ಟ್ರಂಪ್ ಅವರಿಗೆ ಶಾಂತಿ ನೊಬೆಲ್ ಪ್ರಶಸ್ತಿ ನೀಡುವ ಬಗ್ಗೆ ಇನ್ನೂ ಪರಿಗಣಿಸಿಲ್ಲ. ಇದು ಸರಿಯಲ್ಲ ಎಂದು ಹೇಳಿದ್ದರು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation