
ಬೆಂಗಳೂರು – ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ಜಾಲತಾಣ `ಎಕ್ಸ್’ ಮೂಲಕ ಸಂತಸ ವ್ತಕ್ತಪಡಿಸಿದ್ದಾರೆ
`ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು,’ ಎಂದೂ ಹೇಳಿದ್ದಾರೆ.
ರಾಜ್ಯದ ಪ್ರಗತಿಯ ಸಂಕೇತ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಈ ಮಹತ್ತರ ಸಾಧನೆಗಾಗಿ ಶ್ರಮಿಸಿದ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ, ಅಧಿಕಾರಿಗಳು, ಸಿಬ್ಬಂದಿ ಹಾಗೂ ಯೋಜನೆಯ ಲಾಭ ಪಡೆದ ಪ್ರತಿಯೊಬ್ಬ ಮಹಿಳಾ ಪ್ರಯಾಣಿಕರಿಗೂ ಧನ್ಯವಾದಗಳು. ‘ಶಕ್ತಿ’ ಕೇವಲ ಯೋಜನೆಯಲ್ಲ, ಇದು ಮಹಿಳೆಯರ ಸಬಲೀಕರಣ ಮತ್ತು ರಾಜ್ಯದ ಪ್ರಗತಿಯ ಸಂಕೇತವಾಗಿದೆ ಎಂದು ಉಪಮುಖ್ಯಮಂತ್ರ ಡಿ.ಕೆ.ಶಿವಕುಮಾರ ಇವರು ಸಾಮಾಜಿಕ ಜಾಲತಾಣ `ಎಕ್ಸ್’ ಮೂಲಕ ಈ ಶಕ್ತಿ ಯೋಜನೆ ಬಗ್ಗೆ ಶ್ಲಾಘಿಸಿದ್ದಾರೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”