
ಬೆಂಗಳೂರು – ಇತ್ತೀಚೆಗೆ ಹಲವೆಡೆ ಪಿಓಪಿ ಗಣಪತಿಯನ್ನು ಪೂಜಿಸಲಾಗುತ್ತದೆ. ಆದರೆ ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು ಅದರ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಗಣೇಶ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಶ್ರೀ. ಈಶ್ವರ ಬಿ ಖಂಡ್ರೆ ಇವರು ಕರೆ ನೀಡಿದ್ದಾರೆ.
‘ಬಂಗಾರ, ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪೂಜಿಸುವುದು ನಮ್ಮ ಸಂಪ್ರದಾಯವಾಗಿದೆ. ಆದರೆ ಇತ್ತೀಚಿನ ನೀರಲ್ಲಿ ಕರಗದ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ಮತ್ತು ವಿಷಕಾರಿ ಲೋಹದ ರಾಸಾಯನಿಕ ಬಣ್ಣವುಳ್ಳ ಪಿಓಪಿ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಇಂತಹ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ಜಲಚರಗಳು, ಪಶುಪಕ್ಷಿಗಳ ಸಾವಿಗೆ ಕಾರಣವಾಗುತ್ತಿದೆ ಎಂದೂ ತಿಳಿಸಿದ್ದಾರೆ.ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ)ಕಾಯಿದೆ ೧೯೭೪ರ ಕಲಂ ೩೩(ಎ) ರ ಅಂತರ್ಗತ ನದಿ, ಸರೋವರ, ಕೆರೆ, ಕಟ್ಟೆ, ಬಾವಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ಪಿಓಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ.
ಏಕಿದು ಹಾನಿಕರ ?
ಪಿಓಪಿ ನಿರ್ಮಿತ ಮೂರ್ತಿಗಳಲ್ಲಿ ಕ್ಯಾಲ್ಷಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಇರುತ್ತದೆ. ಇದರಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೇಷಿಯಂ ಸೇರಿದಂತೆ ಹಲವು ಅಪಾಯಕಾರಿ ಅಂಶಗಳಿರುತ್ತವೆ. ಅಲ್ಲದೇ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇಂಗಾಲದಂತಹ ಭಾರಲೋಹಗಳನ್ನು ಹೊಂದಿದ ರಾಸಾಯನಿಕ ಬಣ್ಣಗಳನ್ನು ಲೇಪಿಸಲಾಗುತ್ತದೆ. ಇವು ಜಲಮೂಲಗಳನ್ನು ಸೇರಿ, ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!