ವಿಧಾನಸಭೆಯಲ್ಲಿ ಆರ್‌.ಎಸ್‌.ಎಸ್. ನ ಗೀತೆ ಹಾಡಿದ ರಾಜ್ಯದ ಕಾಂಗ್ರೆಸ್ ಸರಕಾರದ ಉಪ ಮುಖ್ಯಮಂತ್ರಿ : DK Shivakumar

ಆರ್‌.ಎಸ್‌.ಎಸ್‌.ನೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ಅದರ ಇತಿಹಾಸವನ್ನು ತಿಳಿದುಕೊಳ್ಳುತ್ತಿದ್ದೇನೆ ಎಂದು ಅಭಿಪ್ರಾಯ

ಡಿ.ಕೆ. ಶಿವಕುಮಾರ್

ಬೆಂಗಳೂರು – ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 21 ರಂದು ವಿಧಾನಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌.ಎಸ್‌.ಎಸ್.) ಗೀತೆ ‘ನಮಸ್ತೆ ಸದಾ ವತ್ಸಲೇ ಮಾತೃಭೂಮೇ’ ಹಾಡಿ ಎಲ್ಲರನ್ನೂ ಅಚ್ಚರಿಗೊಳಿಸಿದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಮೇ ತಿಂಗಳಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಭಾಜಪದ ಶಾಸಕರು ಶಿವಕುಮಾರ್ ಅವರ ಮೇಲೆ ಆರೋಪ ಮಾಡಿದ್ದರು. ಅದಕ್ಕೆ ಉತ್ತರಿಸುವಾಗ ಶಿವಕುಮಾರ್ ಮಾತನಾಡುತ್ತಿದ್ದರು.

ಆರ್‌.ಎಸ್‌.ಎಸ್. ಮಕ್ಕಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ!

ಉಪ ಮುಖ್ಯಮಂತ್ರಿ ಶಿವಕುಮಾರ್ ಅವರು ಮಾತು ಮುಂದುವರೆಸಿ, ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ ಮತ್ತು ಅದು ನನ್ನ ರಕ್ತದಲ್ಲೇ ಇದೆ; ಆದರೆ ನಾನು ಎಲ್ಲಾ ರಾಜಕೀಯ ಪಕ್ಷಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥೆಗಳು ಹೇಗೆ ರೂಪುಗೊಳ್ಳುತ್ತಿವೆ ಎಂದು ನನಗೆ ತಿಳಿದಿದೆ. ಒಬ್ಬ ನಾಯಕನಾಗಿ ನಾನು ಅಧ್ಯಯನ ಮಾಡಿದ್ದೇನೆ. ಅವರು ಪ್ರತಿ ಜಿಲ್ಲೆ ಮತ್ತು ತಾಲ್ಲೂಕಿನ ಶಾಲೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಅದರಲ್ಲಿ ದೊಡ್ಡ ಪ್ರಮಾಣದ ಹಣವನ್ನು ಹೂಡಿಕೆ ಮಾಡುತ್ತಿದ್ದಾರೆ. ಆರ್‌.ಎಸ್‌.ಎಸ್‌.ನವರು ಮಕ್ಕಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದಾರೆ.

ಒಬ್ಬ ನಾಯಕನಾಗಿ, ನನ್ನ ಪ್ರತಿಸ್ಪರ್ಧಿಗಳು ಯಾರು ಮತ್ತು ನನ್ನ ಸ್ನೇಹಿತರು ಯಾರು ಎಂದು ನನಗೆ ತಿಳಿದಿರಬೇಕು. ಹಾಗಾಗಿ ನಾನು ಆರ್‌.ಎಸ್‌.ಎಸ್. ಬಗ್ಗೆ ಮತ್ತು ಅದರ ಇತಿಹಾಸದ ಬಗ್ಗೆ ತಿಳಿದುಕೊಳ್ಳಲು ಮಾತ್ರ ಪ್ರಯತ್ನಿಸಿದೆ. ರಾಜಕೀಯವಾಗಿ ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ, ಅದು ಬೇರೆ ವಿಷಯ. ‘ನಾನು ಕಾಂಗ್ರೆಸ್ಸಿಗ ಮತ್ತು ಕಾಂಗ್ರೆಸ್ ಅನ್ನು ಮುನ್ನಡೆಸುತ್ತೇನೆ’ ಎಂದು ಅವರು ಹೇಳಿದರು.