
ಬೆಂಗಳೂರು – ಜಾರಿ ನಿರ್ದೇಶನಾಲಯ (ಇಡಿ) ರಾಜ್ಯದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಕುಮಾರ್ ಅವರನ್ನು ಅಕ್ರಮ ಆನ್ ಲೈನ್ ಮತ್ತು ಆಫ್ ಲೈನ್ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ಕಿಂ ರಾಜ್ಯದ ಗ್ಯಾಂಗ್ ಟೋಕ್ ನಲ್ಲಿ ಬಂಧಿಸಿದೆ. ಈ ಹಿಂದೆ, ಕಪ್ಪು ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಮತ್ತು ಇತರ ಕೆಲವು ವ್ಯಕ್ತಿಗಳ ಸ್ಥಳಗಳ ಮೇಲೆ ಇ.ಡಿ. ದಾಳಿ ನಡೆಸಿತ್ತು. ವೀರೇಂದ್ರ ಕುಮಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಸಂದರ್ಭದಲ್ಲಿ ಕೆ.ಸಿ. ವೀರೇಂದ್ರ ಅವರಿಂದ ₹ 12 ಕೋಟಿ ವಶಪಡಿಸಿಕೊಳ್ಳಲಾಗಿದೆ. ಅವರ ಬಳಿಯಿದ್ದ 4 ಐಷಾರಾಮಿ ಕಾರುಗಳು, 6 ಕೋಟಿ ಮೌಲ್ಯದ ಚಿನ್ನಾಭರಣಗಳು ಮತ್ತು ಸುಮಾರು 1 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.
🚨 Amid the ban on Online Gaming – Karnataka Congress MLA K.C. Virendra Kumar arrested by ED in a massive gambling & money laundering case!
💰 Seized from him & his family:
• ₹12 crore cash
• Gold worth ₹6 crore
• 4 luxury cars
• Foreign currency ₹1 crore
• Casino &… https://t.co/2pWESqXuRZ pic.twitter.com/SBYG8FXB81— Sanatan Prabhat (@SanatanPrabhat) August 23, 2025
1. ಕೆ.ಸಿ. ವೀರೇಂದ್ರ ಅವರ ಬಳಿ ವಿವಿಧ ಕ್ಯಾಸಿನೊಗಳ ಸದಸ್ಯತ್ವ ಕಾರ್ಡ್‌ಗಳು, ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು, ಹಾಗೆಯೇ ತಾಜ್, ಹಯಾತ್ ಮತ್ತು ಲೀಲಾ ನಂತಹ ಪಂಚತಾರಾ ಹೋಟೆಲ್ ಗಳ ಸದಸ್ಯತ್ವ ಕಾರ್ಡ್‌ಗಳು ಸಹ ಪತ್ತೆಯಾಗಿವೆ.
2. ಕೆ.ಸಿ. ವೀರೇಂದ್ರ ಅವರ ವಿವಿಧ ರಾಜ್ಯಗಳಲ್ಲಿನ ಆಸ್ತಿಗಳ ಮೇಲೆ ದಾಳಿಗಳನ್ನು ನಡೆಸಲಾಗಿದೆ; ಆದರೆ ಯಾವ ಸ್ಥಳಗಳಿಂದ ಯಾವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಇ.ಡಿ. ನೀಡಿಲ್ಲ.
3. ಕೆ.ಸಿ. ವೀರೇಂದ್ರ ಅವರ ಸಹೋದರ ಕೆ.ಸಿ. ನಾಗರಾಜ ಮತ್ತು ಅವರ ಮಗ ಪೃಥ್ವಿ ಎನ್. ರಾಜ್ ಅವರ ವಿವಿಧ ಸ್ಥಳಗಳ ಮೇಲೂ ದಾಳಿ ನಡೆಸಲಾಗಿದ್ದು, ಅಲ್ಲಿಂದ ಹೆಚ್ಚಿನ ಪ್ರಮಾಣದಲ್ಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಂಪಾದಕೀಯ ನಿಲುವುಇಂತಹವರ ಮತ್ತು ಇವರ ಕುಟುಂಬದವರ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ