ಗಡಿ ಭದ್ರತಾ ಪಡೆಯಿಂದ ಕಾರ್ಯಾಚರಣೆ

ಕರ್ಣಾವತಿ (ಗುಜರಾತ) – ಗುಜರಾತ್ ನ ಕಚ್ ಬಳಿ ಸಮುದ್ರದಲ್ಲಿ ಗಡಿ ಭದ್ರತಾ ಪಡೆ 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದೆ. ಅವರ ಬಳಿಯಿಂದ ಒಂದು ಯಾಂತ್ರಿಕೃತ ದೋಣಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಆಗಸ್ಟ್ 24ರಂದು ಬೆಳಗ್ಗೆ 9 ಗಂಟೆಗೆ ನಡೆಸಲಾಯಿತು. ಬಂಧಿತರೆಲ್ಲರೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜತಿ ಗ್ರಾಮದವರು. ಈ ಜನರು ಭಾರತೀಯ ಗಡಿಯೊಳಗೆ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದರು.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಗುಪ್ತಚರ ಮೂಲಗಳಿಂದ ಯೋಧರಿಗೆ ಈ ಸಂಶಯಾಸ್ಪದ ದೋಣಿಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರ ಆಧಾರದ ಮೇಲೆ, ಅವರು ಭಾರತ-ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಕೋರಿ ಹಿನ್ನೀರಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಈ ಮೀನುಗಾರರಿಂದ 60 ಕೆಜಿ ಮೀನು ಹಾಗೂ ದೊಡ್ಡ ಪ್ರಮಾಣದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪಾಕಿಸ್ತಾನಿ ಮೀನುಗಾರರು ಭಾರತೀಯ ಸಮುದ್ರದಲ್ಲಿ ದೀರ್ಘಕಾಲ ಉಳಿಯಲು ಸಿದ್ಧರಾಗಿ ಬಂದಿದ್ದರು ಎಂಬುದನ್ನು ತೋರಿಸುತ್ತದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”