‘ಇನ್ನು ಮುಂದೆ ನಾವು ಭಿಕ್ಷೆ ಬೇಡುವುದಿಲ್ಲ!'(ಅಂತೆ)

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಭಾರತೀಯ ಕ್ರಿಕೆಟ್ ಮಂಡಳಿಯ ಕುರಿತು ಹೇಳಿಕೆ

ಇಸ್ಲಾಮಾಬಾದ (ಪಾಕಿಸ್ತಾನ) – ನಮ್ಮ ನಿಲುವು ಸ್ಪಷ್ಟವಾಗಿದೆ. ಯಾವುದೇ ಚರ್ಚೆ ನಡೆದರೂ, ಅದು ಭಾರತದೊಂದಿಗೆ ಸಮಾನತೆಯ ಆಧಾರದ ಮೇಲೆ ಮಾತ್ರ ನಡೆಯಲಿದೆ. ಈಗ ನಾವು ಯಾವುದೇ ಚರ್ಚೆಗಾಗಿ ಭಿಕ್ಷೆ ಬೇಡುವುದಿಲ್ಲ. ಆ ಸಮಯ ಹೋಗಿದೆ. ಈಗ ಏನಿದ್ದರೂ ಸಮಾನತೆಯ ಆಧಾರದ ಮೇಲೆ ಮಾತ್ರ ನಡೆಯಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹಸಿನ್ ನಕ್ವಿ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

1. ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ವೈರತ್ವದಿಂದಾಗಿ, ಕಳೆದ ಹಲವು ವರ್ಷಗಳಿಂದ ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಕಳೆದ ಕೆಲವು ವರ್ಷಗಳಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಭಾರತೀಯ ಕ್ರಿಕೆಟ್ ಮಂಡಳಿ ‘ಬಿಸಿಸಿಐ’ (ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಅಂದರೆ ಭಾರತೀಯ ಕ್ರಿಕೆಟ್ ಮಂಡಳಿ)ಯನ್ನು ಇದಕ್ಕಾಗಿ ಕೋರುತ್ತಿದೆ; ಆದರೆ ಬಿಸಿಸಿಐ ಅದನ್ನು ನಿರ್ಲಕ್ಷಿಸಿದ್ದರಿಂದ ಮೊಹಸಿನ್ ನಕ್ವಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಬಿಸಿಸಿಐ ಅವರ ಬೇಡಿಕೆಗೆ ಕಸದ ಬುಟ್ಟಿ ತೋರಿಸಿದ್ದರಿಂದ ಮೊಹಸಿನ್ ನಕ್ವಿ ಈ ಹೇಳಿಕೆ ನೀಡಿದ್ದರು‌

2. ಈಗ 2025 ರ ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಸಂಯುಕ್ತ ಅರಬ್ ಎಮಿರೇಟ್ಸ್‌ ನಲ್ಲಿ ಆಯೋಜಿಸಲಾಗುವುದು. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಕ್ರಿಕೆಟ್ ತಂಡಗಳ ನಡುವೆ ಸೆಪ್ಟೆಂಬರ್ 14 ರಂದು ಪಂದ್ಯ ನಡೆಯಲಿದೆ. (ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯರು ‘ಭಾರತೀಯ ಕ್ರಿಕೆಟ್ ತಂಡ ಈ ಪಂದ್ಯವನ್ನೂ ಆಡಬಾರದು’ ಎಂದು ಭಾರತ ಸರಕಾರದ ಮೇಲೆ ಹೆಚ್ಚಿನ ಒತ್ತಡ ಹೇರಬೇಕು! – ಸಂಪಾದಕರು)

ಸಂಪಾದಕೀಯ ನಿಲುವು

ಹಸಿವಿನಿಂದ ಕಂಗಾಲಾಗಿರುವ ಪಾಕಿಸ್ತಾನ ಎಲ್ಲ ಕಡೆಗಳಲ್ಲಿ ಭಿಕ್ಷೆ ಬೇಡುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಅರ್ಥಾತ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಈ ನಿಲುವನ್ನು ಒಂದು ಚಿಕ್ಕ ಮಗು ಕೂಡ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು!