ಲಂಡನ್‌ನಲ್ಲಿನ ಭಾರತೀಯ ರೆಸ್ಟೋರೆಂಟ್‌ಗೆ ಬೆಂಕಿ: ಐವರ ಸ್ಥಿತಿ ಗಂಭೀರ

ಲಂಡನ್ – ಆಗಸ್ಟ್ 22 ರ ರಾತ್ರಿ, ಲಂಡನ್‌ನಲ್ಲಿರುವ ಭಾರತೀಯ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆ ನಡೆದಾಗ, ರೆಸ್ಟೋರೆಂಟ್‌ನಲ್ಲಿ ಸಾಕಷ್ಟು ಜನ ಇದ್ದರು. ಮುಖವಾಡ ಧರಿಸಿದ್ದ ಮೂವರು ಇದ್ದಕ್ಕಿದ್ದಂತೆ ಒಳಗೆ ನುಗ್ಗಿ, ನೆಲದ ಮೇಲೆ ದ್ರವವೊಂದನ್ನು ಸುರಿದು ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ, ರೆಸ್ಟೋರೆಂಟ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಗ್ರಾಹಕರು ಮತ್ತು ಸಿಬ್ಬಂದಿ ತಮ್ಮ ಜೀವ ಉಳಿಸಿಕೊಳ್ಳಲು ಹೆಣಗಾಡಿದ್ದಾರೆ. ಈ ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಜನರ ಜೀವಕ್ಕೆ ಅಪಾಯವನ್ನುಂಟು ಮಾಡಿದ ಆರೋಪದ ಮೇಲೆ ಅವರ ವಿಚಾರಣೆ ನಡೆಯುತ್ತಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಈ ರೆಸ್ಟೋರೆಂಟ್‌ ಅನ್ನು ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಸುಧೀರ್ ಚೀಡೆಲಾ ಎಂಬುವವರು ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಕಳೆದ ಕೆಲವು ವರ್ಷಗಳಿಂದ ಬ್ರಿಟನ್‌ನಲ್ಲಿ ಭಾರತೀಯ ಮೂಲದವರ ಮೇಲೆ, ವಿಶೇಷವಾಗಿ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಈ ದೌರ್ಜನ್ಯಗಳನ್ನು ಇಸ್ಲಾಮಿಕ್ ಕಟ್ಟರವಾದಿಗಳು ಮತ್ತು ಖಲಿಸ್ತಾನಿಗಳು ನಡೆಸುತ್ತಿದ್ದಾರೆ. ಹಾಗಾಗಿ, ಈ ಘಟನೆಯನ್ನು ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು!