ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರಿಂದ ಬಿಗಿ ಬಂದೋಬಸ್ತ್

ಅಹಮದ್‌ನಗರ – ಜಿಲ್ಲೆಯ 3 ಸಾವಿರ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಂದ ‘ಶ್ರೀ’ ವಿಗ್ರಹದ ಪ್ರತಿಷ್ಠಾಪನೆ ಮತ್ತು 221 ಗ್ರಾಮಗಳಲ್ಲಿ ‘ಒಂದು ಗ್ರಾಮ ಒಂದು ಗಣಪತಿ’ ಉಪಕ್ರಮವನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಗಣೇಶೋತ್ಸವದ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 500 ಮಂದಿ ಸಮಾಜ ವಿರೋಧಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ 3 ಸಾವಿರ ಪೊಲೀಸರ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮಾಧ್ಯಮಗಳ ಮೇಲೆ ನಿಗಾ ವಹಿಸಲು ಪ್ರತ್ಯೇಕ ಪೊಲೀಸ್ ತಂಡವನ್ನು ಸಹ ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ಮಹಾನಿರೀಕ್ಷಕ ದತ್ತಾತ್ರಯ ಕರಾಳೆ ಅವರು ಮಾಧ್ಯಮಗಳಿಗೆ ತಿಳಿಸಿದರು.
ದತ್ತಾತ್ರಯ ಅವರು ಈ ಬಗ್ಗೆ ಮಾತನಾಡಿ, “ಗಣೇಶೋತ್ಸವದ ಸಮಯದಲ್ಲಿ ಪೊಲೀಸರ ರಜೆಗಳನ್ನು ರದ್ದುಗೊಳಿಸಲಾಗಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ತಮ್ಮ ಮಂಟಪಗಳ ಸುತ್ತ-ಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚಿಸಲಾಗಿದೆ ಮತ್ತು ಅವರು ಇದರ ಪಾಲನೆ ಮಾಡಿದ್ದಾರೆಯೇ ಎಂದು ಪರಿಶೀಲಿಸಲಾಗುವುದು. ನಾಗರಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವಾಗ ಎಚ್ಚರಿಕೆ ವಹಿಸಬೇಕು. ಮಹಾನಗರಪಾಲಿಕೆ ಮತ್ತು ಮಹಾವಿತರಣ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಬಂಧಿತ ಸೂಚನೆಗಳನ್ನು ನೀಡಲಾಗಿದೆ. ಅಹಮದ್‌ನಗರದಲ್ಲಿ ಅಪೂರ್ಣಗೊಂಡ ರಸ್ತೆ ಕಾಮಗಾರಿಗಳ ಕುರಿತು ಕ್ರಮ ಕೈಗೊಳ್ಳುವಂತೆ ಮಹಾನಗರಪಾಲಿಕೆಗೆ ಸೂಚನೆ ನೀಡಲಾಗಿದೆ. ವಿದ್ಯುತ್ ತಂತಿಗಳ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಹಾವಿತರಣ ಅಧಿಕಾರಿಗಳಿಗೂ ಕೂಡ ಸೂಚನೆಗಳನ್ನು ನೀಡಲಾಗಿದೆ” ಎಂದು ವಿವರಿಸಿದರು.
ಸಂಪಾದಕೀಯ ನಿಲುವುಅಹಮದ್ನಗರ ಜಿಲ್ಲೆಯ ಗ್ರಾಮಗಳನ್ನು ಮಾದರಿಯಾಗಿಟ್ಟುಕೊಂಡು, ಎಲ್ಲ ಗಣೇಶೋತ್ಸವ ಮಂಡಳಿಗಳು ‘ಒಂದು ಗ್ರಾಮ ಒಂದು ಗಣಪತಿ’ ಉಪಕ್ರಮವನ್ನು ಜಾರಿಗೆ ತರಬೇಕು! |
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein