ಪೂಜ್ಯ ಸಂತ ಶ್ರೀ ಅಸಾರಾಮ್ ಬಾಪು ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಲು ರಾಜಸ್ಥಾನ ಉಚ್ಚ ನ್ಯಾಯಾಲಯ ನಿರಾಕರಣೆ

ಆಗಸ್ಟ್ 30ರಂದು ಮತ್ತೆ ಜೈಲಿಗೆ

ಜೋಧ್‌ಪುರ (ರಾಜಸ್ಥಾನ) – ಪೂಜ್ಯ ಸಂತ ಶ್ರೀ ಅಸಾರಾಮ್ ಬಾಪು ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಲು ರಾಜಸ್ಥಾನ ಉಚ್ಚ ನ್ಯಾಯಾಲಯ ನಿರಾಕರಿಸಿದೆ. ಇದರ ಪರಿಣಾಮವಾಗಿ ಅವರು ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಯೊಳಗೆ ಜೋಧ್‌ಪುರ ಕೇಂದ್ರ ಕಾರಾಗೃಹಕ್ಕೆ ಶಿಕ್ಷೆ ಅನುಭವಿಸಲು ಹಿಂತಿರುಗಬೇಕಾಗಿದೆ. ಅವರು ಗುಜರಾತ್ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳಿಂದ, ಅವರು ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದರು. ಕರ್ಣಾವತಿ ಸಿವಿಲ್ ಆಸ್ಪತ್ರೆಯಿಂದ ಪಡೆದ ವೈದ್ಯಕೀಯ ವರದಿಯ ಆಧಾರದ ಮೇಲೆ, ನ್ಯಾಯಾಲಯವು ಮಧ್ಯಂತರ ಜಾಮೀನು ವಿಸ್ತರಿಸುವ ಅರ್ಜಿಯನ್ನು ತಿರಸ್ಕರಿಸಿದೆ. ವೈದ್ಯಕೀಯ ವರದಿಯ ಪ್ರಕಾರ, ಅಸಾರಾಮ್ ಬಾಪು ಅವರ ಆರೋಗ್ಯ ಸ್ಥಿತಿ ಅಷ್ಟು ಗಂಭೀರವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಅವರ ಮಧ್ಯಂತರ ಜಾಮೀನು ವಿಸ್ತರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.