
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ಹೊಸದಾಗಿ ನೇಮಕಗೊಂಡ 25 ನ್ಯಾಯಾಧೀಶರಲ್ಲಿ ಒಬ್ಬರೂ ಹಿಂದೂ ನ್ಯಾಯಾಧೀಶರಿಲ್ಲ. ಇದಕ್ಕೆ ಬಾಂಗ್ಲಾದೇಶದ ಅತ್ಯಂತ ದೊಡ್ಡ ಅಲ್ಪಸಂಖ್ಯಾತರ ಸಂಘಟನೆಯಾದ ‘ಹಿಂದೂ-ಬೌದ್ಧ-ಕ್ರೈಸ್ತ ಏಕತಾ ಪರಿಷತ್’ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪರಿಷತ್ ತನ್ನ ಹೇಳಿಕೆಯಲ್ಲಿ, ಈ ವಾರ 25 ನ್ಯಾಯಮೂರ್ತಿಗಳನ್ನು ಸರ್ವೋಚ್ಚ ನ್ಯಾಯಾಲಯದ ಉಚ್ಚ ನ್ಯಾಯಾಲಯದ ಪೀಠದ ಮೇಲೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. ಇವರಲ್ಲಿ 9 ನ್ಯಾಯಾಧಿಕಾರಿಗಳು, 9 ವಕೀಲರು ಮತ್ತು 7 ಕಾನೂನು ಅಧಿಕಾರಿಗಳಿದ್ದಾರೆ. ಈ ಎಲ್ಲ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ಅರ್ಹ ವ್ಯಕ್ತಿಗಳಿದ್ದರೂ ಕೂಡ ಅವರನ್ನು ನ್ಯಾಯಮಂಡಳಿಯಲ್ಲಿ ಸೇರಿಸದಿರುವುದು ದುಃಖದ ಸಂಗತಿಯಾಗಿದೆ ಎಂದು ಖೇದ ವ್ಯಕ್ತಪಡಿಸಿದೆ.
750 ಖೈದಿಗಳು ಪರಾರಿ
ಬಾಂಗ್ಲಾದೇಶದ ಮುಖ್ಯ ಕಾರಾಗೃಹ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಆದ ಗಲಭೆಯ ಸಮಯದಲ್ಲಿ ಪಲಾಯನಗೈದ ಸುಮಾರು 2,700 ಖೈದಿಗಳಲ್ಲಿ ಸುಮಾರು 750 ಖೈದಿಗಳು ಇನ್ನೂ ಪರಾರಿಯಾಗಿದ್ದಾರೆ. ಇವರಲ್ಲಿ ಅನೇಕರಿಗೆ ಗಲ್ಲು ಶಿಕ್ಷೆಯಾಗಿದೆ, ಮತ್ತು ಪರಾರಿಯಾದವರಲ್ಲಿ 9 ಜಿಹಾದಿ ಭಯೋತ್ಪಾದಕರೂ ಸೇರಿದ್ದಾರೆ.
ಸಂಪಾದಕೀಯ ನಿಲುವುಇಸ್ಲಾಮಿಕ್ ರಾಷ್ಟ್ರಗಳಲ್ಲಿ ಹಿಂದೂಗಳನ್ನು ನಿರ್ಲಕ್ಷಿಸಲಾಗುತ್ತದೆ. ಆದರೆ ಭಾರತದಂತಹ ಜಾತ್ಯತೀತ ದೇಶದಲ್ಲಿ ಮತಾಂಧ ಮುಸ್ಲಿಮರನ್ನು ತಲೆಯ ಮೇಲೆ ಹೊತ್ತು ಮೆರೆಸಲಾಗುತ್ತದೆ ಮತ್ತು ಇದರಿಂದ ಅಪಾಯಕಾರಿ ಪರಿಸ್ಥಿತಿ ಉಂಟಾಗುತ್ತದೆ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation