
ಮಂಗಳೂರು – ಇಲ್ಲಿನ ಪುಂಜಾಲಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯು ನಿಯಮಗಳನ್ನು ಉಲ್ಲಂಘಿಸಿ ಧ್ವನಿವರ್ಧಕಗಳನ್ನು ಬಳಸಿದೆ ಎಂಬ ಆರೋಪದ ಮೇಲೆ ಪೊಲೀಸರು ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
1. ಪುಂಜಾಲಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯಕರ್ತರು ಶ್ರೀ ಗಣೇಶ ಚತುರ್ಥಿಯ ನಿಮಿತ್ತ ರಾತ್ರಿ 10.45ರ ಸುಮಾರಿಗೆ ಧ್ವನಿವರ್ಧಕಗಳನ್ನು ಬಳಸಿ ಕಾರ್ಯಕ್ರಮವನ್ನು ಮುಂದುವರಿಸಿದ್ದರು. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಕಾರ್ಯಕರ್ತರಿಗೆ ಶಬ್ದಮಾಲಿನ್ಯಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸುವಂತೆ ಮತ್ತು ಧ್ವನಿವರ್ಧಕಗಳನ್ನು ನಿಲ್ಲಿಸುವಂತೆ ತಿಳಿಸಿದರು. ಸಮಿತಿಯ ಕಾರ್ಯಕರ್ತರು ಅವರ ಆದೇಶವನ್ನು ಪಾಲಿಸಿದರು.
2. ಮತ್ತೊಮ್ಮೆ ಧ್ವನಿವರ್ಧಕ ಬಳಸಿದ್ದಕ್ಕಾಗಿ ಸಮಿತಿಯ ಅಧ್ಯಕ್ಷ ಕೌಶಿಕ್ ಶೆಟ್ಟಿ ಮತ್ತು ಪದಾಧಿಕಾರಿಗಳಾದ ಪುನೀತ್ ಮಡಂತ್ಯಾರು, ತಾರಾನಾಥ ಕಜಕ್ಕಾಳು ಹಾಗೂ ಗುರು ಮಡಂತ್ಯಾರು ಅವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.
3. ಆಯೋಜಕರು ಲಿಖಿತ ಸೂಚನೆಯಲ್ಲಿರುವ ನಿಯಮಗಳನ್ನು ಉಲ್ಲಂಘಿಸಿ ಧ್ವನಿವರ್ಧಕಗಳನ್ನು ಬಳಸಿದ್ದಕ್ಕಾಗಿ ಮತ್ತು ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದರು.
ಸಂಪಾದಕೀಯ ನಿಲುವುದಿನಕ್ಕೆ 5 ಬಾರಿ, ಅದು ಕೂಡ ವರ್ಷದ 365 ದಿನಗಳೂ ಶಬ್ದಮಾಲಿನ್ಯದ ನಿಯಮಗಳನ್ನು ಉಲ್ಲಂಘಿಸುವ ಮಸೀದಿಗಳ ಧ್ವನಿವರ್ಧಕಗಳ ವಿರುದ್ಧ ಕ್ರಮ ಕೈಗೊಳ್ಳಲು ಈ ಕರ್ತವ್ಯನಿಷ್ಠ ಪೊಲೀಸ್ ಅಧಿಕಾರಿಗಳು ಒಂದು ದಿನವಾದರೂ ಹೋಗಿದ್ದಾರೆಯೇ? ಅಕಸ್ಮಾತ್ ಹೋಗಿದ್ದರೂ, ಈ ರೀತಿ ಪ್ರಕರಣಗಳನ್ನು ದಾಖಲಿಸುವ ಧೈರ್ಯವನ್ನು ತೋರಿಸಿದ್ದಾರೆಯೇ? – ಸಂಪಾದಕರು |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!