ಭಾರೀ ಮಳೆ; ರಾಜಧಾನಿಯಲ್ಲಿ ಅಪಾಯದ ಮಟ್ಟವನ್ನು ದಾಟಿದ ಯಮುನಾ!

ನವ ದೆಹಲಿ – ಯಮುನಾ ನದಿಯ ನೀರು ಅಪಾಯದ ಮಟ್ಟವನ್ನು ಮೀರಿದೆ. ನದಿಯ ನೀರಿನ ಮಟ್ಟವು 205.33 ಮೀಟರ್‌ಗಳಿಗಿಂತ ಹೆಚ್ಚಾಗಿದೆ. ಹಿಮಾಚಲ ಪ್ರದೇಶದಲ್ಲಿ ಸುರಿದ ಮಳೆ ಮತ್ತು ಹತ್ನಿ ಕುಂಡದಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ಕಳೆದ ಹಲವು ದಿನಗಳಿಂದ ಪರಿಸ್ಥಿತಿ ಇನ್ನಷ್ಟು ಭೀಕರವಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಹೆಚ್ಚಾಗಿದೆ. ಇದರಿಂದಾಗಿ ಸರ್ಕಾರಕ್ಕೆ ಆತಂಕ ಶುರುವಾಗಿದೆ. ತಗ್ಗು ಪ್ರದೇಶಗಳಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಲಹೆ ನೀಡಲಾಗುತ್ತಿದೆ. ಹವಾಮಾನ ಇಲಾಖೆಯು ಸೆಪ್ಟೆಂಬರ್ 5ರವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.