
ನವದೆಹಲಿ – ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಪ್ರವಾಸದಲ್ಲಿದ್ದಾಗ, ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ಮೊದಲು, ಉಕ್ರೇನ್ ಅಧ್ಯಕ್ಷ ವ್ಲೋಡಿಮಿರ್ ಝೆಲೆನ್ಸ್ಕಿಯವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಪ್ರಧಾನ ಮಂತ್ರಿ ಕಚೇರಿಯು ಈ ಕುರಿತು ಮಾಹಿತಿ ನೀಡಿದ್ದು, ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಝೆಲೆನ್ಸ್ಕಿ ತಮ್ಮ ದೃಷ್ಟಿಕೋನಗಳನ್ನು ವ್ಯಕ್ತಪಡಿಸಿದರು. ಮತ್ತೊಂದೆಡೆ, ಝೆಲೆನ್ಸ್ಕಿ ‘ಎಕ್ಸ್’ ನಲ್ಲಿ ಸಂಭಾಷಣೆಯ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಎರಡು ವಾರಗಳ ಹಿಂದೆ ಅಮೆರಿಕ ಮತ್ತು ಯುರೋಪಿಯನ್ ನಾಯಕರೊಂದಿಗೆ ವಾಷಿಂಗ್ಟನ್‌ನಲ್ಲಿ ನಡೆದ ಸಭೆಯ ಬಗ್ಗೆ ಮಾಹಿತಿ ನೀಡಿದರು. ವಾಷಿಂಗ್ಟನ್‌ನಲ್ಲಿ ನಡೆದ ಸಭೆಯಲ್ಲಿ, ಉಕ್ರೇನ್ ರಷ್ಯಾದ ಮುಖ್ಯಸ್ಥರೊಂದಿಗೆ ಸಭೆಗೆ ಸಿದ್ಧವಾಗಿದೆ ಎಂದು ಮತ್ತೆ ಸ್ಪಷ್ಟಪಡಿಸಿದೆ.
ಝೆಲೆನ್ಸ್ಕಿ ಅವರು ಮಾತನಾಡುತ್ತಾ,
೧. ಆಗಸ್ಟ್ ೧೫ ರಂದು ಅಮೆರಿಕದ ಅಲಾಸ್ಕಾದಲ್ಲಿ ಪುಟಿನ್ ಮತ್ತು ಟ್ರಂಪ್ ಅವರ ಭೇಟಿಯ ನಂತರವೂ ರಷ್ಯಾದೊಂದಿಗೆ ಕದನ ವಿರಾಮ ಒಪ್ಪಂದದಲ್ಲಿ ಯಾವುದೇ ಪ್ರಗತಿಯಾಗದಿದ್ದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಭೆಯ ನಂತರವೂ ರಷ್ಯಾ ಉಕ್ರೇನ್ ಮೇಲೆ ದಾಳಿಗಳನ್ನು ಮುಂದುವರೆಸಿದೆ.
೨. ರಷ್ಯಾ ರಾಜತಾಂತ್ರಿಕ ಸಿದ್ಧತೆಗಳನ್ನು ಮಾಡಬೇಕಿತ್ತು; ಆದರೆ ಯಾವುದೇ ಸೂಚನೆಯನ್ನು ನೀಡದೆ, ನಮ್ಮ ನಾಗರಿಕ ಪ್ರದೇಶಗಳ ಮೇಲೆ ದಾಳಿ ಮಾಡಿದೆ. ಈ ದಾಳಿಯಲ್ಲಿ ನಮ್ಮ ಅನೇಕ ನಾಗರಿಕರು ಸಾವನ್ನಪ್ಪಿದ್ದಾರೆ.
೩. ಭಾರತವು ಅಗತ್ಯ ಪ್ರಯತ್ನಗಳನ್ನು ಮಾಡಲು ಮತ್ತು ಶಾಂಘೈ ಶೃಂಗಸಭೆಯ ಸಂದರ್ಭದಲ್ಲಿ ನಡೆಯುವ ದ್ವಿಪಕ್ಷೀಯ ಸಭೆಗಳಲ್ಲಿ ರಷ್ಯಾ ಮತ್ತು ಇತರ ನಾಯಕರಿಗೆ ಸೂಕ್ತ ಸಂದೇಶವನ್ನು ನೀಡಲು ಸಿದ್ಧವಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation