
ನವದೆಹಲಿ – ಕಳೆದ ಶತಮಾನದಲ್ಲಿನ ಬಲ್ಗೇರಿಯಾದ ಭವಿಷ್ಯ ನುಡಿಯುವ ಬಾಬಾ ವೆಂಗಾ ಅವರ ಹೆಚ್ಚಿನ ಭವಿಷ್ಯವಾಣಿಗಳು ನಿಜವಾಗಿವೆ. ಅವರು 2025 ರ ಬಗ್ಗೆ ಅನೇಕ ಭವಿಷ್ಯವಾಣಿಗಳನ್ನು ಹೇಳಿದ್ದರು. ಅವುಗಳಲ್ಲಿ ಕೆಲವು ಭವಿಷ್ಯವಾಣಿಗಳು ನಿಜವಾಗುತ್ತಿವೆ. ಅವರ ಭವಿಷ್ಯವಾಣಿಯ ಪ್ರಕಾರ, 2025 ಜಗತ್ತಿಗೆ ಒಂದು ಕಠಿಣ ವರ್ಷವಾಗಿರಲಿದೆ. ಈ ವರ್ಷ ಆರ್ಥಿಕ ಬಿಕ್ಕಟ್ಟು ಬರಲಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ವಿಶ್ವದ ಅನೇಕ ದೇಶಗಳ ಆರ್ಥಿಕ ಸ್ಥಿತಿ ತುಂಬಾ ಕೆಟ್ಟದಾಗಿದೆ. ಆದ್ದರಿಂದ, ಬಾಬಾ ವೆಂಗಾ ಅವರ ಭವಿಷ್ಯವಾಣಿ ನಿಜವಾಗಬಹುದೆಂದು ಜನರು ಭಯ ವ್ಯಕ್ತ ಪಡಿಸುತ್ತಿದ್ದಾರೆ.
ಇತರ ಭವಿಷ್ಯವಾಣಿಗಳು ಮತ್ತು ಪ್ರಸ್ತುತ ಪರಿಸ್ಥಿತಿ
ಬಾಬಾ ವೆಂಗಾ ಅವರು 2025 ರಲ್ಲಿ ಜಗತ್ತು ನೈಸರ್ಗಿಕ ವಿಕೋಪಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಿದ್ದರು. ಅವರು ಜ್ವಾಲಾಮುಖಿ ಸ್ಫೋಟದ ಬಗ್ಗೆಯೂ ಎಚ್ಚರಿಕೆ ನೀಡಿದ್ದರು, ವಿಶೇಷವಾಗಿ ಅಮೆರಿಕದ ಪಶ್ಚಿಮ ಕರಾವಳಿಗೆ ಎಚ್ಚರಿಕೆ ನೀಡಿದ್ದರು.
ವಾಸ್ತವ ಪರಿಸ್ಥಿತಿಯನ್ನು ಗಮನಿಸಿದರೆ, ವಿಶ್ವದ ಅನೇಕ ದೇಶಗಳಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಭಾರಿ ವಿನಾಶ ಸಂಭವಿಸಿದೆ. ಭಾರತದ ಬಗ್ಗೆ ಹೇಳುವುದಾದರೆ, ದೇಶದ ಹೆಚ್ಚಿನ ರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹದ ಹಾವಳಿ ಹೆಚ್ಚಾಗಿದೆ. ಜಮ್ಮು ಮತ್ತು ಕಾಶ್ಮೀರದಿಂದ ಕೇರಳದವರೆಗೆ ಸುರಿದ ಭಾರೀ ಮಳೆಯಿಂದಾಗಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಅನೇಕ ಮೇಘಸ್ಫೋಟದ ಘಟನೆಗಳು ಸಂಭವಿಸಿವೆ.
ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
2025 ಕ್ಕೆ ಬಾಬಾ ವೆಂಗಾ ಹೇಳಿದ ಇತರ ಭವಿಷ್ಯವಾಣಿಗಳು!

1. ಈ ವರ್ಷ ಮೂರನೇ ಮಹಾಯುದ್ಧ ಪ್ರಾರಂಭವಾಗುತ್ತದೆ.
2. ಅವರ ಪ್ರಕಾರ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಬ್ಬ ಪ್ರಬಲ ಜಾಗತಿಕ ನಾಯಕರಾಗಿ ಹೊರಹೊಮ್ಮುತ್ತಾರೆ.
3. ಯೂರೋಪ್‌ನಲ್ಲಿ ಒಂದು ದೊಡ್ಡ ಸಂಘರ್ಷ ಪ್ರಾರಂಭವಾಗಲಿದ್ದು, ಅದು ಕ್ರಮೇಣ ಇಡೀ ಜಗತ್ತನ್ನು ವ್ಯಾಪಿಸುತ್ತದೆ. (ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನಿಸಿದರೆ, ಜನರು ಮೂರನೇ ಮಹಾಯುದ್ಧದ ಬಗ್ಗೆಯೂ ಭಯಪಡುತ್ತಿದ್ದಾರೆ.)
4. ಅವರು ಯೂರೋಪ್‌ನಲ್ಲಿ ಇಸ್ಲಾಮಿಕ್ ಆಳ್ವಿಕೆ ಮತ್ತು ಭೂಮಿಯಿಂದ ಮನುಕುಲದ ವಿನಾಶದ ಬಗ್ಗೆಯೂ ಭವಿಷ್ಯ ನುಡಿದಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !