1 ಸಾವಿರದ 300 ಗ್ರಾಮಗಳು ಜಲಾವೃತ, ಎರಡೂವರೆ ಲಕ್ಷ ಜನರು ಸಿಲುಕಿದ್ದಾರೆ

ಅಮೃತಸರ – ಪಂಜಾಬ್‌ನಲ್ಲಿ ಮಳೆಯ ಅಬ್ಬರದಿಂದಾಗಿ ಇಲ್ಲಿಯವರೆಗೆ 30 ಜನರು ಸಾವನ್ನಪ್ಪಿದ್ದಾರೆ. ಸುಮಾರು 1 ಸಾವಿರದ 300 ಗ್ರಾಮಗಳು ಜಲಾವೃತವಾಗಿದ್ದು, ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಹಾಗೂ ಪಂಜಾಬ್‌ಗೆ ಎಲ್ಲ ರೀತಿಯ ಸಹಾಯ ಒದಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಹರಿಯುವ ರಾವಿ, ಸಟ್ಲೆಜ್ ಮತ್ತು ಬಿಯಾಸ್ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರಿ ಹಾನಿಯನ್ನುಂಟು ಮಾಡಿದೆ. ಪ್ರವಾಹದಿಂದಾಗಿ. ಅಮೃತಸರದಲ್ಲಿ 35 ಸಾವಿರ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಹೊರತರಲು ಮತ್ತು ಸಹಾಯ ಒದಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಸೈನಿಕರನ್ನು ಕರೆಸಲಾಗಿದೆ.
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!