ತನಿಖೆಯಲ್ಲಿ ಸಹಕರಿಸದಿದ್ದರೆ ಬಂಧಿಸಲು ಅನುಮತಿ ಕೋರಲು ಪೊಲೀಸರಿಗೆ ಅವಕಾಶ! – ಸರ್ವೋಚ್ಚ ನ್ಯಾಯಾಲಯ

ನವದೆಹಲಿ – ಪ್ರಧಾನ ಮಂತ್ರಿ ಮೋದಿ ಮತ್ತು ಸಂಘದ ಸ್ವಯಂಸೇವಕರ ಬಗ್ಗೆ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ರಚಿಸಿದ್ದ ಇಂದೋರ್ ಮೂಲದ ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯಗೆ ಸರ್ವೋಚ್ಚ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಾಳವೀಯ ವಿವಿಧ ಸಾಮಾಜಿಕ ಮಾಧ್ಯಮಗಳ ಮೂಲಕ ಕ್ಷಮೆಯಾಚಿಸಿದ್ದಾರೆ ಎಂದು ಪರಿಗಣಿಸಿ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಸಪ್ಟೆಂಬರ್ 2 ರಂದು ನಡೆದ ವಿಚಾರಣೆಯ ಸಮಯದಲ್ಲಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸ್ವೀಕರಿಸಿತು. ಆದಾಗ್ಯೂ, ವ್ಯಂಗ್ಯಚಿತ್ರಕಾರ ಮಾಳವೀಯ ತನಿಖೆಯಲ್ಲಿ ಸಹಕರಿಸದಿದ್ದರೆ, ಅವರ ಜಾಮೀನನ್ನು ರದ್ದುಗೊಳಿಸುವಂತೆ ಪೊಲೀಸರು ಕೋರಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಪೊಲೀಸರಿಗೆ ಸ್ವಾತಂತ್ರ್ಯ ನೀಡಿದೆ.
ಏನು ಈ ಪ್ರಕರಣ ?
ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿನಯ ಜೋಶಿ ಅವರು ಮೇ 2025ರಲ್ಲಿ ಇಂದೋರ್ ಪೊಲೀಸರಿಗೆ ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಅವರ ವಿರುದ್ಧ ದೂರು ನೀಡಿದ್ದರು. ಮಾಳವೀಯ ಅವರು ತಮ್ಮ ವ್ಯಂಗ್ಯಚಿತ್ರಗಳ ಮೂಲಕ ಆಕ್ಷೇಪಾರ್ಹ ವಿಷಯವನ್ನು ಪ್ರಸಾರ ಮಾಡುವುದರ ಜೊತೆಗೆ ಪ್ರಧಾನ ಮಂತ್ರಿ, ಸಂಘ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಸೌಹಾರ್ದತೆಯನ್ನು ಕದಡಿದ್ದಾರೆ ಎಂದು ಜೋಶಿ ಆರೋಪಿಸಿದ್ದರು.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್