
ನವದೆಹಲಿ – ಸಪ್ಟೆಂಬರ್ ೧, ೨೦೨೫ರಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನಲ್ಲಿ, ೨೦೧೪ರ ತನ್ನ ಹಿಂದಿನ ತೀರ್ಪನ್ನು ಮರುಪರಿಶೀಲಿಸುವಂತೆ ತಿಳಿಸಿದೆ. ೨೦೧೪ ರಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಪ್ರಕಾರ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆಯಿಂದ ವಿನಾಯಿತಿ ನೀಡಲಾಗಿತ್ತು.
ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನಮೋಹನ್ ಅವರ ಪೀಠವು, ಅನೇಕ ಶಿಕ್ಷಣ ಸಂಸ್ಥೆಗಳು ಈ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಅಲ್ಪಸಂಖ್ಯಾತ ಸ್ಥಾನಮಾನ ಪಡೆಯಲು ಪ್ರಯತ್ನಿಸುತ್ತಿವೆ ಎಂದು ಹೇಳಿದೆ. ಈ ವಿನಾಯಿತಿಯು ಸಮಾನ ಶಿಕ್ಷಣ ವ್ಯವಸ್ಥೆ ಮತ್ತು ಸಾಮಾಜಿಕ ಸಮಾನತೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಪ್ರಕರಣವನ್ನು ಹಿರಿಯ ನ್ಯಾಯಪೀಠಕ್ಕೆ ವರ್ಗಾಯಿಸುವಾಗ, ೨೦೧೪ರ ತೀರ್ಪು ಸಂವಿಧಾನದ ವಿಧಿ ೨೧ಎ (ಶಿಕ್ಷಣದ ಹಕ್ಕು) ಮತ್ತು ವಿಧಿ ೩೦(೧) (ಅಲ್ಪಸಂಖ್ಯಾತರಿಗೆ ಸಂಸ್ಥೆಗಳನ್ನು ಸ್ಥಾಪಿಸುವ ಹಕ್ಕು) ನಡುವೆ ಸಮತೋಲನ ಕಾಯ್ದುಕೊಂಡಿಲ್ಲ ಎಂದು ಖಂಡಪೀಠ ಹೇಳಿದೆ.
ಖಂಡಪೀಠ ಹೇಳಿದ್ದು,
೧. ಶಿಕ್ಷಣ ಹಕ್ಕು ಕಾಯ್ದೆಯ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಂಸ್ಥೆಗಳು ತಮ್ಮನ್ನು ಅಲ್ಪಸಂಖ್ಯಾತರೆಂದು ಘೋಷಿಸಿಕೊಳ್ಳುವುದು, ದುರ್ಬಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದಿಂದ ದೂರ ಇರಿಸಿದಂತಾಗುವುದು.
೨. ಶಿಕ್ಷಣ ಹಕ್ಕು ಕಾಯ್ದೆಯಡಿ ಬರುವ ಶಿಕ್ಷಕ ಅರ್ಹತಾ ಪರೀಕ್ಷೆ (TET)ಯಂತಹ ಗುಣಮಟ್ಟದ ಖಾತರಿ ಷರತ್ತುಗಳು ಈ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಇದರಿಂದ ಶಿಕ್ಷಣದ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತದೆ.
೩. ಅಲ್ಪಸಂಖ್ಯಾತರಿಗಾಗಿ ನಡೆಸುತ್ತಿರುವ ಅನೇಕ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಮೂಲಕ ನಿಶ್ಚಿತಗೊಳಿಸಿರುವ ಸೌಲಭ್ಯಗಳು ನೀಡುವುದಿಲ್ಲ. ಇದರಿಂದ ಅಲ್ಲಿ ಓದುವ ವಿದ್ಯಾರ್ಥಿಗಳು ಸಮಾನತೆ ಮತ್ತು ಪರಿಚಿತ ಭಾವನೆಯಿಂದ ವಂಚಿತರಾಗುತ್ತಿದ್ದಾರೆ
೪. ಈ ಪ್ರಕರಣವು ಈಗ ದೊಡ್ಡ ಸಂವಿಧಾನ ಪೀಠದ ಮುಂದೆ ಹೋಗಲಿದೆ. ಅಲ್ಲಿ, ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆಯಿಂದ ಸಂಪೂರ್ಣ ವಿನಾಯಿತಿ ನೀಡುವುದು ಸರಿಯೇ ಅಥವಾ ಇಲ್ಲವೇ ಎಂಬ ನಿರ್ಧಾರ ಕೈಗೊಳ್ಳಲಾಗುವುದು. ಈ ನಿರ್ಧಾರವು ದೇಶದ ಲಕ್ಷಾಂತರ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು.
ಶಿಕ್ಷಣ ಹಕ್ಕು ಕಾಯ್ದೆ (RTE) ಎಂದರೇನು?
‘ಶಿಕ್ಷಣ ಹಕ್ಕು ಕಾಯ್ದೆ, ೨೦೦೯’ ಭಾರತ ಸರಕಾರ ಜಾರಿಗೆ ತಂದ ಕಾಯ್ದೆಯಾಗಿದೆ. ಈ ಕಾಯ್ದೆಯ ಪ್ರಕಾರ ೬ರಿಂದ ೧೪ ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಹಕ್ಕನ್ನು ನೀಡಲಾಗಿದೆ. ಈ ಕಾಯ್ದೆಯ ಕಲಂ ೧೨(೧)(ಸಿ) ಅಡಿಯಲ್ಲಿ, ಖಾಸಗಿ ಶಾಲೆಗಳು ತಮ್ಮ ಶೇ. ೨೫% ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಮತ್ತು ಹಿಂದುಳಿದ ವರ್ಗದ ಮಕ್ಕಳಿಗಾಗಿ ಮೀಸಲಿಡಬೇಕಾಗುತ್ತದೆ. ಶಿಕ್ಷಣದಲ್ಲಿ ಎಲ್ಲ ವರ್ಗಗಳಿಗೂ ಸಮಾನತೆ ಮತ್ತು ಸಾಮಾಜಿಕ ಸಮಾನತೆಯನ್ನು ಖಚಿತಪಡಿಸುವುದು ಇದರ ಉದ್ದೇಶವಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!