ಹಿಮಾಚಲ ಪ್ರದೇಶ ಮತ್ತು ಉತ್ತರಖಂಡ ರಾಜ್ಯಗಳಲ್ಲಿ ಅಕ್ರಮವಾಗಿ ಮರಗಳನ್ನು ಕಡಿದಿದಕ್ಕೆ ಸಮಸ್ಯೆ ! – ಸರ್ವೋಚ್ಚ ನ್ಯಾಯಾಲಯ – Supreme Court HP Uttarakhand Tree Logs

ಇದನ್ನು ನ್ಯಾಯಾಲಯ ಏಕೆ ಹೇಳಬೇಕಾಗುತ್ತದೆ ? ಸರಕಾರಿ ವ್ಯವಸ್ಥೆಯ ಗಮನಕ್ಕೆ ಬರುವುದಿಲ್ಲವೇ?

ನವದೆಹಲಿ – ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ರಾಜ್ಯಗಳಲ್ಲಿ ಭೂಕುಸಿತ ಮತ್ತು ಪ್ರವಾಹದ ಬಗ್ಗೆ ಗಮನ ಹರಿಸಿರುವ ಸರ್ವೋಚ್ಚ ನ್ಯಾಯಾಲಯ, ಕೇಂದ್ರ ಸರಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಉತ್ತರವನ್ನು ಕೇಳಿದೆ. ಸರ್ವೋಚ್ಚ ನ್ಯಾಯಾಲಯುವು, ಅನಧಿಕೃತವಾಗಿ ಮರಗಳನ್ನು ಕಡಿಯುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಹೇಳಿದೆ.

೧. ಭೂಕುಸಿತ ಮತ್ತು ಪ್ರವಾಹದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯ, ಬೆಟ್ಟಗಳ ಮೇಲಿರುವ ಮರಗಳನ್ನು ಅನಧಿಕೃತವಾಗಿ ಕಡಿಯಲಾಗುತ್ತಿದೆ, ಎಂದು ಹೇಳಿದೆ.

೨. ಹಿಮಾಚಲ ಪ್ರದೇಶದ ಪ್ರವಾಹದ ನೀರು ಬೆಟ್ಟಗಳಿಂದ ದೊಡ್ಡ ಪ್ರಮಾಣದ ಮರಗಳನ್ನು ಕೊಂಡೊಯ್ದಿರುವ ವೀಡಿಯೊಗಳನ್ನು ಉಲ್ಲೇಖಿಸಿ, ಇದು ಬಹಳ ಗಂಭೀರ ಸಮಸ್ಯೆಯಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

೩. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ ಚಂದ್ರನ ಅವರ ಪೀಠವು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮತ್ತು ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್ ರಾಜ್ಯಗಳ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

೪. ಪೀಠವು ಅನಾಮಿಕಾ ರಾಣಾ ಅವರು ಸಲ್ಲಿಸಿದ ಅರ್ಜಿಯನ್ನು ಎರಡು ವಾರಗಳ ನಂತರ ವಿಚಾರಣೆಗಾಗಿ ಪಟ್ಟಿ ಮಾಡಿದೆ, ಹಾಗೆಯೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪರಿಹಾರ ಕ್ರಮಗಳನ್ನು ಖಚಿತಪಡಿಸಿಕೊಳ್ಳಲು ಹೇಳಿದೆ.