
ರಾಂಚಿ – ಜಾರ್ಖಂಡ್‌ನ ಪಲಾಮು ಜಿಲ್ಲೆಯ ಮಾನಾತು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 4 ರಂದು ಮುಂಜಾನೆ ಭದ್ರತಾ ಪಡೆಗಳ ಸೇನೆ ಮತ್ತು ನಿಷೇಧ ಹೇರಿದ್ಧ ನಕ್ಸಲ್ ಸಂಘಟನೆ ‘ಥರ್ಡ್ ಕಾನ್ಫರೆನ್ಸ್ ಪ್ರೆಸೆಂಟೇಶನ್ ಕಮಿಟಿ’ (ಟಿ.ಎಸ್.ಪಿ.ಸಿ.) (ಸಿಪಿಐ-ಮಾವೋವಾದಿ ಗುಂಪು) ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಇಬ್ಬರು ಸೈನಿಕರು ವೀರ ಮರಣ ಹೊಂದಿದ್ದಾರೆ. ಸಂತನ ಕುಮಾರ ಮತ್ತು ಸುನಿಲ ರಾಮ ಎಂದು ಅವರ ಹೆಸರಿದೆ. ಈ ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.
ಟಿ.ಎಸ್.ಪಿ.ಸಿ. ವಲಯ ಕಮಾಂಡರ್ ಶಶಿಕಾಂತ್ ಗಂಜೂ ತಮ್ಮ ಕೇದಲ ಗ್ರಾಮದಲ್ಲಿ ನಡೆಯುತ್ತಿರುವ ಉತ್ಸವಕ್ಕೆ ಬರುವ ಸಾಧ್ಯತೆಯಿದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಶಶಿಕಾಂತ್ ಮೇಲೆ 10 ಲಕ್ಷ ರೂಪಾಯಿ ಬಹುಮಾನವಿದೆ. ಈ ಆಧಾರದ ಮೇಲೆ ಪೊಲೀಸರು ವಿಶೇಷ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಪೊಲೀಸರ ತಂಡ ಗ್ರಾಮದ ಬಳಿ ತಲುಪುತ್ತಿದ್ದಂತೆ ನಕ್ಸಲರಿಗೆ ಇದರ ಮಾಹಿತಿ ಸಿಕ್ಕಿದೆ. ಶಶಿಕಾಂತ್ ಗಂಜೂ ಮತ್ತು ಅವರ ನಕ್ಸಲ್ ಸಹಚರರು ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸಹ ಪ್ರತಿದಾಳಿ ನಡೆಸಿದ್ದಾರೆ. ಈ ಗುಂಡಿನ ಚಕಮಕಿಯ ನಂತರ, ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರೆದಿದ್ದು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !