ಚುನಾವಣಾ ಆಯೋಗದ ಮೇಲೆ ಅವಿಶ್ವಾಸ ವ್ಯಕ್ತಪಡಿಸುತ್ತಾ ರಾಜ್ಯದ ಕಾಂಗ್ರೆಸ್‌ನ ವಿಚಿತ್ರ ನಿರ್ಧಾರ!

ಬೆಂಗಳೂರು – ರಾಜ್ಯದ ಸ್ಥಳೀಯ ಚುನಾವಣೆಗಳನ್ನು ಮತಯಂತ್ರಗಳ ಮೂಲಕವಲ್ಲ, ‘ಬ್ಯಾಲೆಟ್ ಪೇಪರ್’ (ಮತಪತ್ರ) ಮೂಲಕ ನಡೆಸುವುದಾಗಿ ಕಾಂಗ್ರೆಸ್ ಸರಕಾರ ಘೋಷಿಸಿದೆ. ಮತಯಂತ್ರಗಳಿಂದ ಚುನಾವಣೆಯಲ್ಲಿ ಮೋಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಆದಾಗ್ಯೂ, ಚುನಾವಣಾ ಆಯೋಗವು ವಿರೋಧ ಪಕ್ಷಗಳ ಆರೋಪಗಳನ್ನು ಹಲವು ಬಾರಿ ತಿರಸ್ಕರಿಸಿದೆ. ಆಯೋಗದ ಪ್ರಕಾರ, ಮತಯಂತ್ರಗಳನ್ನು ‘ಹ್ಯಾಕ್’ ಮಾಡುವುದು ಕಷ್ಟಕರವಷ್ಟೇ ಅಲ್ಲ, ಅಸಾಧ್ಯ ಕೂಡ ಆಗಿದೆ. ಹೀಗಿದ್ದರೂ, ರಾಜ್ಯದ ಮುಂಬರುವ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ‘ಬ್ಯಾಲೆಟ್ ಪೇಪರ್’ ಮೂಲಕ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಮಾಧ್ಯಮಗಳಿಗೆ ತಿಳಿಸಿದ್ದು, ಜನರ ‘ಮತಯಂತ್ರಗಳ’ ಮೇಲಿನ ನಂಬಿಕೆ ಮತ್ತು ವಿಶ್ವಾಸಾರ್ಹತೆ ಕಡಿಮೆಯಾಗುತ್ತಿದೆ. (ಮತಯಂತ್ರಗಳ ಮೇಲಲ್ಲ, ಸಮಾಜಘಾತುಕ ಕಾಂಗ್ರೆಸ್ಸಿನ ಮೇಲೆ ಜನರ ವಿಶ್ವಾಸ ಕಡಿಮೆಯಾಗಿದೆ! – ಸಂಪಾದಕರು) ರಾಜ್ಯ ಚುನಾವಣಾ ಆಯೋಗಕ್ಕೆ ‘ಮತದಾರರ ಪಟ್ಟಿಯನ್ನು ಸುಧಾರಿಸುವುದು ಸುಲಭವಾಗಲಿ’ ಎಂಬ ಉದ್ದೇಶದಿಂದ ನಾವು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ಮತ್ತು ಪ್ರಸ್ತುತ ನಿಯಮಗಳಲ್ಲಿ ಸುಧಾರಣೆ ತರಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.
ಸಂಪಾದಕೀಯ ನಿಲುವು
|
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ