
ಇಂಫಾಲ/ನವದೆಹಲಿ – ಮಣಿಪುರದಲ್ಲಿ ಶಾಂತಿಗೆ ದಾರಿ ಸುಗಮವಾಗಿದೆ. ರಾಜ್ಯದ ಕುಕಿ ಮತ್ತು ಝೋಮಿ ಸಮುದಾಯಗಳ ಒಂದು ವರ್ಗವನ್ನು ಪ್ರತಿನಿಧಿಸುವ ‘ಕುಕಿ-ಝೋ ಪರಿಷತ್’ ಪ್ರಯಾಣಿಕರು ಮತ್ತು ಸರಕುಗಳ ಮುಕ್ತ ಸಂಚಾರಕ್ಕಾಗಿ ರಾಜ್ಯದ ಜೀವನಾಡಿಯೆಂದು ಪರಿಗಣಿಸಲ್ಪಟ್ಟಿರುವ ‘ರಾಷ್ಟ್ರೀಯ ಹೆದ್ದಾರಿ-2’ ಅನ್ನು ತೆರೆಯಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾತುಕತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ‘ಕುಕಿ-ಝೋ ಪರಿಷತ್’ ಕೇಂದ್ರ ಸರಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಮನವಿಯಲ್ಲಿ ಇದನ್ನು ದೃಢಪಡಿಸಿದೆ.
ಕುಕಿ ಬಂಡುಕೋರ ಗುಂಪುಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವಿನ ತ್ರಿಪಕ್ಷೀಯ ಒಪ್ಪಂದದಲ್ಲಿ, ಮಣಿಪುರದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ತರಲು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವ ಅಗತ್ಯದ ಬಗ್ಗೆ ಒಪ್ಪಂದವಾಯಿತು. ಅಪಾಯಕಾರಿ ಪ್ರದೇಶಗಳಿಂದ ನಿರಾಶ್ರಿತರ ಶಿಬಿರಗಳನ್ನು ಸ್ಥಳಾಂತರಿಸಲಾಗುವುದು ಎಂದು ಒಪ್ಪಂದದಲ್ಲಿ ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಗೃಹ ಸಚಿವಾಲಯ ಮತ್ತು ‘ಕುಕಿ-ಝೋ ಪರಿಷತ್’ ನಡುವೆ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಚರ್ಚೆ ನಡೆಯುತ್ತಿತ್ತು. ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಕಳೆದ ಫೆಬ್ರವರಿಯಲ್ಲಿ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಧಾನಸಭೆಯನ್ನು ಸ್ಥಗಿತಗೊಳಿಸಲಾಗಿತ್ತು.
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ