
ಬೆಂಗಳೂರು – ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಕಾಂಗ್ರೆಸ್ ಸರಕಾರವು ಮತಾಂಧ ಮುಸ್ಲಿಂ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದೆ. ಕಾಂಗ್ರೆಸ್ ಸರಕಾರದ ಈ ನಿರ್ಧಾರವನ್ನು ಭಾಜಪವು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. ಈ ಸಂಬಂಧ, ಭಾಜಪದ ಮಾಜಿ ಸಂಸದ ಪ್ರತಾಪ ಸಿಂಹ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ಬಾನು ಮುಷ್ತಾಕ್ ಅವರ ಆಯ್ಕೆಗೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.
ಸಿಂಹ ಅವರು ಅರ್ಜಿಯಲ್ಲಿ,
1. ದಸರಾ ಉತ್ಸವದ ಉದ್ಘಾಟನೆಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ಪೂಜೆ ಮಾಡಲಾಗುತ್ತದೆ. ಬಾನು ಮುಷ್ತಾಕ್ ಹಿಂದೂ ಮತ್ತು ಕನ್ನಡ ವಿರೋಧಿ ಸಿದ್ಧಾಂತವನ್ನು ಹೊಂದಿದ್ದಾರೆ. ರಾಜ್ಯ ಸರಕಾರವು ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿ ಆಹ್ವಾನ ನೀಡಿದೆ. ಆದ್ದರಿಂದ, ಸರಕಾರದ ಈ ನಿರ್ಧಾರಕ್ಕೆ ತಡೆ ನೀಡಬೇಕು.
2. ಮೈಸೂರಿನ ರಾಜಮನೆತನವೂ ಸರಕಾರದ ಈ ನಿಲುವನ್ನು ವಿರೋಧಿಸಿದೆ. ಸರಕಾರದ ಈ ನಿರ್ಧಾರದಿಂದ ಹಿಂದೂಗಳ ಭಾವನೆಗಳಿಗೆ ನೋವುಂಟಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನವನ್ನು ವಾಪಸ್ ಪಡೆಯಲು ನ್ಯಾಯಾಲಯವು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಹೋರಾಡಲು ನಾವು ಸಿದ್ಧ ! – ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ – ಮಾಜಿ ಸಂಸದ ಸಿಂಹ ಅವರ ಅರ್ಜಿಯ ಕುರಿತು ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರತಾಪ್ ಸಿಂಹ ನ್ಯಾಯಾಲಯಕ್ಕೆ ಹೋಗಿರುವುದು ನನಗೆ ತುಂಬಾ ಸಂತೋಷವಾಗಿದೆ. ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವೂ ಸಹ ಕಾನೂನು ಹೋರಾಟ ನಡೆಸುತ್ತೇವೆ. ಸಿಂಹ ಅವರು ಇದರಲ್ಲಿ ರಾಜಕೀಯ ಹೋರಾಟ ನಡೆಸಿದರೆ, ನಾವು ಎಲ್ಲದಕ್ಕೂ ಉತ್ತರ ನೀಡುತ್ತೇವೆ, ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಮಾತು ಮುಂದುವರೆಸುತ್ತಾ, ಈ ಹಿಂದೆ ನಿಸ್ಸಾರ್ ಅಹಮದ್ ಅವರು ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಿದಾಗ ಸಿಂಹ ಅವರು ಏಕೆ ನ್ಯಾಯಾಲಯಕ್ಕೆ ಹೋಗಲಿಲ್ಲ? (ನಿಸ್ಸಾರ್ ಅಹಮದ್ ಅವರಿಗೆ ಹಿಂದೂಗಳ ದೇವತೆಗಳ ಬಗ್ಗೆ ಗೌರವವಿದೆ. ಅಲ್ಲದೆ, ಹಿಂದೂ ಧರ್ಮವು ವಿಶಾಲವಾಗಿರುವುದರಿಂದ, ಹಿಂದೂಗಳು ಅಹಮದ್ ಅವರ ಆಹ್ವಾನವನ್ನು ಸಹಜವಾಗಿಯೇ ವಿರೋಧಿಸಲಿಲ್ಲ ! – ಸಂಪಾದಕರು) ಸಿಂಹ ಅವರು ನ್ಯಾಯಾಲಯಕ್ಕೆ ಹೋಗಲಿ, ಎಂದು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ