ಮುಂಬಯಿ ನಾಯರ್ ಆಸ್ಪತ್ರೆ ಮತ್ತು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

ಮುಂಬಯಿ – ಇಲ್ಲಿನ ನಾಯರ್ ಆಸ್ಪತ್ರೆ ಮತ್ತು ಮುಂಬಯಿ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕಿ ನಾಶಪಡಿಸುವ ಬೆದರಿಕೆ ಇ-ಮೇಲ್ ಮೂಲಕ ಒಡ್ಡಲಾಗಿದೆ. ಈ ಬೆದರಿಕೆಯಿಂದ ಆಸ್ಪತ್ರೆಯ ಆವರಣದಲ್ಲಿ ಕೆಲ ಕಾಲ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರಿಗೆ ಯಾವುದೇ ಅನುಮಾನಾಸ್ಪದ ವಸ್ತು ಸಿಕ್ಕಿಲ್ಲ.

ಸಂಪಾದಕೀಯ ನಿಲುವು

ಪದೇ ಪದೇ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದರಿಂದ ಮುಂಬಯಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದೆಯೇ ಎಂಬ ಪ್ರಶ್ನೆ ಮೂಡುತ್ತದೆ!