
(‘ಇಸ್ರೋ’ ಎಂದರೆ ‘ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್’)
ಬೆಂಗಳೂರು – ‘ಆಪರೇಷನ್ ಸಿಂದೂರ್’ನಲ್ಲಿ ಭಾರತೀಯ ಸೇನೆಗೆ ಸಹಾಯ ಮಾಡಲು ‘ಇಸ್ರೋ’ದ 400 ವಿಜ್ಞಾನಿಗಳು ಹಗಲಿರುಳು ಕೆಲಸ ಮಾಡಿದ್ದಾರೆ ಎಂದು ‘ಇಸ್ರೋ’ ಮುಖ್ಯಸ್ಥ ವಿ. ನಾರಾಯಣನ್ ಅವರು ಮಾಹಿತಿ ನೀಡಿದರು. ಅವರು ‘ಆಲ್ ಇಂಡಿಯಾ ಮ್ಯಾನೇಜಮೆಂಟ್ ಅಸೋಸಿಯೇಷನ್’ (ಎ.ಐ.ಎಂ.ಎ.)ದ 52ನೇ ರಾಷ್ಟ್ರೀಯ ನಿರ್ವಹಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದರು. ಭಾರತೀಯ ಸೇನೆಯು ‘ಆಪರೇಷನ್ ಸಿಂದೂರ್’ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದೆ. ಈ ಕಾರ್ಯಾಚರಣೆಯಡಿಯಲ್ಲಿ ಸೇನೆಯು ನಿಖರವಾದ ವೈಮಾನಿಕ ದಾಳಿಗಳನ್ನು ನಡೆಸಿ ಪಾಕಿಸ್ತಾನದಲ್ಲಿನ ಹಲವು ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿತು.
ನಾರಾಯಣನ್ ಅವರು ಮಾತು ಮುಂದುವರೆಸಿ,
1. ‘ಆಪರೇಷನ್ ಸಿಂದೂರ್’ ಸಮಯದಲ್ಲಿ ಎಲ್ಲಾ ಉಪಗ್ರಹಗಳು ಹಗಲಿರುಳು ಸುಗಮವಾಗಿ ಕೆಲಸ ಮಾಡುತ್ತಿದ್ದವು.
2. 400ಕ್ಕೂ ಹೆಚ್ಚು ವಿಜ್ಞಾನಿಗಳು ರಕ್ಷಣಾ ಪಡೆಗಳಿಗೆ ನಿಖರವಾದ ಮಾಹಿತಿ ಒದಗಿಸಲು ಹಗಲಿರುಳು ಕೆಲಸ ಮಾಡಿದರು. ಇದರಿಂದ ಸೇನೆಗೆ ನಿಖರ ಗುರಿ ತಲುಪಲು ಸಹಾಯವಾಯಿತು.
3. ಇಸ್ರೋ’ದ ಕನಿಷ್ಠ 10 ಉಪಗ್ರಹಗಳು ದೇಶದ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 24 ಗಂಟೆಗಳ ಕಾಲ ಕೆಲಸ ಮಾಡಿದವು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !