
ನವದೆಹಲಿ – ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 17 ರಂದು ತಮ್ಮ 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಅವರಿಗೆ ಪ್ರಪಂಚದಾದ್ಯಂತ ಶುಭಾಶಯಗಳ ಮಹಾಪೂರ ಹರಿದುಬಂದಿದೆ. ಎಲ್ಲರೂ ಅವರಿಗೆ ದೀರ್ಘಾಯುಷ್ಯವನ್ನು ಹಾರೈಸಿದರೆ, ಕೆಲವರು ಅವರ ನಾಯಕತ್ವ ಕೌಶಲ್ಯವನ್ನು ವಿಶೇಷವಾಗಿ ಶ್ಲಾಘಿಸಿದರು.
1. ವ್ಲಾಡಿಮಿರ್ ಪುಟಿನ್: ರಷ್ಯಾದ ಅಧ್ಯಕ್ಷ ಪುಟಿನ್ ಅವರು, ಮೋದಿ ಅವರ ನಾಯಕತ್ವದಲ್ಲಿ ಭಾರತವು ಸಾಮಾಜಿಕ, ಆರ್ಥಿಕ, ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಪ್ರಭಾವಶಾಲಿ ಪ್ರಗತಿ ಸಾಧಿಸಿದೆ. ಅವರ ಕಾರ್ಯದಿಂದಾಗಿ ಭಾರತಕ್ಕೆ ಜಾಗತಿಕ ವೇದಿಕೆಯಲ್ಲಿ ಗೌರವ ಮತ್ತು ಪ್ರತಿಷ್ಠೆ ಸಿಕ್ಕಿದೆ ಎಂದು ಹೇಳಿದರು.
2. ಬೆಂಜಮಿನ್ ನೆತನ್ಯಾಹು: ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು, ನನ್ನ ಪ್ರೀತಿಯ ಸ್ನೇಹಿತ ಪ್ರಧಾನಿ ಮೋದಿ ಅವರು ಭಾರತಕ್ಕಾಗಿ ಬಹಳಷ್ಟು ಕೆಲಸ ಮಾಡಿದ್ದಾರೆ ಎಂದು ಹೇಳಿದರು.
3. ಜಾರ್ಜಿಯಾ ಮೆಲೋನಿ: ಇಟಲಿ ಪ್ರಧಾನಿ ಮೆಲೋನಿ ಅವರು, ಪ್ರಧಾನಿ ಮೋದಿ ಅವರ ಶಕ್ತಿ, ದೃಢಸಂಕಲ್ಪ ಮತ್ತು ನಾಯಕತ್ವ ಸಾಮರ್ಥ್ಯ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು.
4. ಆಂಥೋನಿ ಅಲ್ಬನೀಸ್: ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರು ವೀಡಿಯೊ ಸಂದೇಶದ ಮೂಲಕ ಶುಭಾಶಯ ಕೋರಿದರು. ಅವರು, ಭಾರತ-ಆಸ್ಟ್ರೇಲಿಯಾ ಸ್ನೇಹದ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಹೇಳಿದರು.
5. ಕ್ರಿಸ್ಟೋಫರ್ ಲಕ್ಸನ್: ನ್ಯೂಜಿಲೆಂಡ್ ಪ್ರಧಾನಿ ಲಕ್ಸನ್ ಅವರು, 75ನೇ ಹುಟ್ಟುಹಬ್ಬವು ನಿಮ್ಮ ನಾಯಕತ್ವದ ಬುದ್ಧಿವಂತಿಕೆಯ ಸಂಕೇತವಾಗಿದೆ ಎಂದು ಹೇಳಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯಲ್ಲಿ ಭಾರತದೊಂದಿಗೆ ಹೆಚ್ಚಿನ ಸಹಭಾಗಿತ್ವ ಹೊಂದಲು ನಮಗೆ ಸಂತೋಷವಾಗುತ್ತದೆ.
ಅಮೆರಿಕದ ಬಿಲಿಯನೇರ್ ಬಿಲ್ ಗೇಟ್ಸ್, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್, ಮಾರಿಷಸ್ ಪ್ರಧಾನಿ ನವೀನ್‌ಚಂದ್ರ ರಾಮಗುಲಾಮ್ ಸೇರಿದಂತೆ ಅನೇಕ ನಾಯಕರು ಪ್ರಧಾನಿಯವರಿಗೆ ಶುಭಾಶಯ ಕೋರಿದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!