
ನವದೆಹಲಿ – ಕರ್ನಾಟಕ ಉಚ್ಚನ್ಯಾಯಾಲಯವು ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿರುವ ಆರೋಪ ಹೊತ್ತಿರುವ ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿತ್ತು. ಈ ತೀರ್ಪನ್ನು ಹೈದರ್ ಅಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಇದನ್ನು ಆಲಿಸಿದ ಸರ್ವೋಚ್ಚ ನ್ಯಾಯಾಲಯವು ‘ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವುದು ಹೇಗೆ ಅಪರಾಧವಾಗುತ್ತದೆ?’ ಎಂದು ಪ್ರಶ್ನಿಸಿದೆ.
1. ಸೆಪ್ಟೆಂಬರ್ 24, 2023 ರಂದು, ಕರ್ನಾಟಕದ ಐತೂರ್ ಗ್ರಾಮದ ಬದರಿಯಾ ಜುಮಾ ಮಸೀದಿಯೊಳಗೆ ಕೆಲವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು; ಆದರೆ ನಂತರ ಅವರಿಗೆ ಜಾಮೀನು ನೀಡಲಾಯಿತು. ಸೆಪ್ಟೆಂಬರ್ 13 ರಂದು ಕರ್ನಾಟಕ ಉಚ್ಚನ್ಯಾಯಾಲಯವು ವಿಚಾರಣೆಯನ್ನು ರದ್ದುಗೊಳಿಸಿತು.
2. ಅರ್ಜಿದಾರರು, ಉಚ್ಚನ್ಯಾಯಾಲಯವು ವಿಚಾರಣೆಯನ್ನು ರದ್ದುಗೊಳಿಸಿ ತಪ್ಪು ಮಾಡಿದೆ ಎಂದು ಹೇಳಿದ್ದಾರೆ. ಪೊಲೀಸ್ ತನಿಖೆ ಪೂರ್ಣಗೊಂಡಿಲ್ಲ. ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿಲ್ಲ. ಬಲವಂತವಾಗಿ ಮಸೀದಿಗೆ ಪ್ರವೇಶಿಸುವುದು ಅಪರಾಧವಾಗಿದೆ. ಮಸೀದಿಯೊಳಗೆ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದರಿಂದ ಗಲಭೆ ಭುಗಿಲೇಳಬಹುದು. ಇದು ಕಾನೂನಿನ ಪ್ರಕಾರವೂ ಅಪರಾಧವಾಗಿದೆ. ಈ ಘಟನೆ ಮಸೀದಿಯೊಳಗೆ ನಡೆದಿದ್ದು, ಇದರಿಂದ ಮುಸ್ಲಿಮರ ಜೀವಕ್ಕೆ ಅಪಾಯ ನಿರ್ಮಾಣವಾಗಿತ್ತು. ಉಚ್ಚನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸುವ ಮೊದಲು ಪೊಲೀಸರಿಗೆ ತನಿಖೆ ಪೂರ್ಣಗೊಳಿಸಲು ಅವಕಾಶ ನೀಡಬೇಕಿತ್ತು.
3. ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯವು, ಅವರು ನಿರ್ದಿಷ್ಟ ಧಾರ್ಮಿಕ ಘೋಷಣೆ ಕೂಗಿದ್ದಾರೆಯೇ ಎಂದು ಕೇಳಿತು. ಇದರಲ್ಲಿ ಅಪರಾಧ ಎಲ್ಲಿದೆ? ಮಸೀದಿಯಲ್ಲಿ ಘೋಷಣೆ ಕೂಗಿದ ಆರೋಪಿಗಳನ್ನು ನೀವು ಹೇಗೆ ಗುರುತಿಸಿದ್ದೀರಿ? ಅದರ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ನೀವು ಹೇಳುತ್ತೀರಿ.
4. ಉಚ್ಚನ್ಯಾಯಾಲಯವು ಈ ಆರೋಪಗಳಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 503 (ಕ್ರಿಮಿನಲ್ ಬೆದರಿಕೆ) ಅಥವಾ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ತತ್ವಗಳು ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಎಂಬುದನ್ನು ಸರ್ವೋಚ್ಚ ನ್ಯಾಯಾಲಯವು ಗಮನಿಸಿದೆ.
ಕರ್ನಾಟಕ ಉಚ್ಚನ್ಯಾಯಾಲಯದ ನಿರೀಕ್ಷಣೆಗಳು
ಕರ್ನಾಟಕ ಉಚ್ಚನ್ಯಾಯಾಲಯವು ತನ್ನ ಆದೇಶದಲ್ಲಿ ಯಾರಾದರೂ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರೆ, ಅದು ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ಹೇಗೆ ನೋವುಂಟು ಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ಹೇಳಿತ್ತು. ಈ ಘಟನೆಯು ಸಾರ್ವಜನಿಕ ಅಶಾಂತಿಗೆ ಕಾರಣವಾಗಲಿಲ್ಲ ಅಥವಾ ಸಮಾಜದಲ್ಲಿ ವಿಭಜನೆಗೆ ಕಾರಣವಾಗಲಿಲ್ಲ ಎಂದು ಹೇಳಲಾಗಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !