ಬೆಂಗಳೂರಿನ ಶಿವಾಜಿನಗರದಲ್ಲಿರುವ ಹೊಸ ಮೆಟ್ರೋ ನಿಲ್ದಾಣಕ್ಕೆ ‘ಸೇಂಟ್ ಮೇರಿ’ ಎಂದು ಹೆಸರಿಡಲು ಪ್ರಯತ್ನ

ಬೆಂಗಳೂರು – ಬ್ರಿಟಿಷರು ದೇಶ ಬಿಟ್ಟು ಹೋಗಿ 78 ವರ್ಷಗಳಾಗಿವೆ. ಆದರೂ ಬ್ರಿಟಿಷ್ ಮತ್ತು ಕ್ರೈಸ್ತ ಹೆಸರುಗಳನ್ನು ಇಟ್ಟು ಯಾರನ್ನೋ ಖುಷಿಪಡಿಸಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಹೊಸ ಮೆಟ್ರೋ ನಿಲ್ದಾಣಕ್ಕೆ ‘ಸೇಂಟ್ ಮೇರಿ’ ಎಂದು ಹೆಸರಿಡುವ ಅಗತ್ಯವಿಲ್ಲ. ನಮಗೆ ಬ್ರಿಟಿಷರ ಗುರುತು ಬೇಡ, ನಮಗೆ ಭಾರತದ ಗುರುತು ಬೇಕು. ನೀವು ಈ ನಗರವನ್ನು ಕ್ರೈಸ್ತ ನಗರ, ವ್ಯಾಟಿಕನ್ ಸಿಟಿ ಮಾಡಲು ಹೊರಟಿದ್ದೀರಾ? ನೀವು ನಮ್ಮ ಬೇಡಿಕೆಯನ್ನು ಒಪ್ಪಿಕೊಳ್ಳದಿದ್ದರೆ ನಾವು ಆಂದೋಲನ ಮಾಡುತ್ತೇವೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ. ಪ್ರಮೋದ ಮುತಾಲಿಕ ಎಚ್ಚರಿಕೆ ನೀಡಿದ್ದಾರೆ. ಈ ವಿಷಯದ ಕುರಿತು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ವಿವಿಧ ಹಿಂದೂ ಸಂಘಟನೆಗಳು ಮತ್ತು ಶಿವಾಜಿನಗರದ ನಿವಾಸಿಗಳು ‘ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ ಲಿಮಿಟೆಡ್’ನ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ. ಮುತಾಲಿಕ ಅವರು ಮಾತನಾಡುತ್ತಿದ್ದರು.
ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ, ಶಿವಾಜಿನಗರದ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟಿ ಶ್ರೀ. ಪ್ರದೀಪ ಕುಮಾರ, ವೀರ ಶಿವಾಜಿ ಸೇನೆಯ ಶ್ರೀ. ಕಮಲೇಶ ರಾವ್, ಶಿವ ಗರ್ಜನಾ ಸೇನೆಯ ಶ್ರೀ. ದೀಪಕ ಚೌಹಾಣ, ಶ್ರೀರಾಮ ಸೇನೆಯ ಶ್ರೀ. ಸುಂದರೇಶ ನಗರಲ ಮತ್ತು ಶ್ರೀ. ಮಂಜುನಾಥ, ದುರ್ಗಾ ಸೇನೆಯ ಸೌ. ಸರಸ್ವತಿ ಪ್ರವೀಣ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಮನವಿಯಲ್ಲಿ ಮಂಡಿಸಲಾದ ವಿಷಯಗಳು –
1. 1630 ರಿಂದ 1640 ರ ಅವಧಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ತಂದೆ ಶಹಾಜಿ ಮಹಾರಾಜರೊಂದಿಗೆ ಬೆಂಗಳೂರಿನ ಶಿವಾಜಿನಗರ ಪ್ರದೇಶದಲ್ಲಿ ತಮ್ಮ ಬಾಲ್ಯವನ್ನು ಕಳೆದಿದ್ದರು. ಆ ಸಮಯದಲ್ಲಿ ಮೈಸೂರಿನ ಆಡಳಿತಗಾರರು ಗೌರವ ಸೂಚಕವಾಗಿ ಈ ಪ್ರದೇಶಕ್ಕೆ ‘ಶಿವಾಜಿನಗರ’ ಎಂದು ಹೆಸರಿಸಿದ್ದರು.
2. ಛತ್ರಪತಿ ಶಿವಾಜಿ ಮಹಾರಾಜರ ಜೀವನವು ಇಂದಿಗೂ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ. ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರಿಟ್ಟರೆ ಭಾರತದ ಪರಂಪರೆಗೆ ಕೂಡ ಗೌರವ ಸಿಗುತ್ತದೆ.
3. ಸರಕಾರವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಇತಿಹಾಸವನ್ನು ತಿರುಚಬಾರದು ಮತ್ತು ಜನರ ಭಾವನೆಗಳ ಜೊತೆಗೆ ಛತ್ರಪತಿ ಶಿವಾಜಿ ಮಹಾರಾಜರ ಗೌರವವನ್ನು ರಕ್ಷಿಸಬೇಕು.
ಸ್ಥಳೀಯರ ಅಭಿಪ್ರಾಯ
ಶಿವಾಜಿನಗರದಲ್ಲಿ ಕನ್ನಡ ಮತ್ತು ಮರಾಠಿ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಸ್ಥಳೀಯರು ಮತ್ತು ನಗರದ ಜನರಿಗೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರಿನಲ್ಲಿ ನಿಲ್ದಾಣ ಇರುವುದು ಹೆಮ್ಮೆಯ ವಿಷಯವಾಗಿದೆ. ‘ಸೇಂಟ್ ಮೇರಿ’ ಎಂದು ಹೆಸರಿಟ್ಟರೆ ಪ್ರಯಾಣಿಕರಲ್ಲಿ ಗೊಂದಲ ಉಂಟಾಗುತ್ತದೆ ಮತ್ತು ಸ್ಥಳೀಯರ ಭಾವನೆಗಳಿಗೆ ನೋವುಂಟು ಮಾಡುತ್ತದೆ.
ಸಂಪಾದಕೀಯ ನಿಲುವುಕಾಂಗ್ರೆಸ್ ಪಕ್ಷಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಮೊದಲಿನಿಂದಲೇ ದ್ವೇಷ ಇರುವುದರಿಂದ ಸರಕಾರ ಅವರ ಹೆಸರನ್ನು ಇಡುವುದಿಲ್ಲ, ಇದರಲ್ಲಿ ಆಶ್ಚರ್ಯವೇನಿಲ್ಲ. ಧರ್ಮಪ್ರೇಮಿ ಹಿಂದೂಗಳು ಸರಕಾರದ ಮೇಲೆ ಒತ್ತಡ ಹೇರಿ ಮಹಾರಾಜರ ಹೆಸರನ್ನು ಇಡಲು ಒತ್ತಾಯಿಸಬೇಕು! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ