|

ಲೆಹ್ (ಲಡಾಖ್) – ಲಡಾಖ್ ಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಮತ್ತು ಸಂವಿಧಾನದ ಆರನೇ ಶೆಡ್ಯೂಲ್‌ಗೆ ಸೇರಿಸಲು ಒತ್ತಾಯಿಸಿ ಪರಿಸರ ತಜ್ಞ ಸೋನಮ್ ವಾಂಗ್ ಚುಕ್ 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಾಂಗ್ ಚುಕ್‌ಗೆ ಬೆಂಬಲ ನೀಡಲು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ರಸ್ತೆಗಿಳಿದಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ ವಾಹನ ಸೇರಿದಂತೆ ಇತರೆ ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. ಇತರೆ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ನಾಶಪಡಿಸಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ಮಾಡಿ ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ.
ಲಡಾಖ್ ಗೆ ಲೋಕಸಭೆಗೆ 2 ಸ್ಥಾನಗಳು ಮತ್ತು ಲಡಾಖ್ ನ ಆದಿವಾಸಿ ಸಮುದಾಯಕ್ಕೆ ‘ಆದಿವಾಸಿ’ ಸ್ಥಾನಮಾನ ನೀಡುವಂತೆ ವಿದ್ಯಾರ್ಥಿಗಳು ಬೇಡಿಕೆಗಳನ್ನು ಇಟ್ಟಿದ್ದಾರೆ.
ಆಗಸ್ಟ್ 5, 2019ರಂದು ಕಲಂ 370 ಅನ್ನು ತೆಗೆದುಹಾಕಿದ ನಂತರ ಜಮ್ಮು-ಕಾಶ್ಮೀರವನ್ನು ವಿಭಜಿಸಿ ಲಡಾಖ್ ಗೆ ಸ್ವತಂತ್ರ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಲಾಯಿತು. ಈಗ ಲಡಾಖ್ ಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡುವ ಬೇಡಿಕೆ ಕೇಳಿಬಂದಿದೆ.
ಸಂಪಾದಕೀಯ ನಿಲುವುಇಂತಹ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಿ ಭಾರತವನ್ನು ಅಸ್ಥಿರಗೊಳಿಸುವ ಪಿತೂರಿ ಇದೆಯೇ ಎಂದು ಭದ್ರತಾ ವ್ಯವಸ್ಥೆಗಳು ತನಿಖೆ ಮಾಡುವುದು ಅವಶ್ಯಕ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !