
ಭೋಪಾಲ (ಮಧ್ಯಪ್ರದೇಶ) – ದೇವಸ್ಥಾನದ ಆವರಣದಲ್ಲಿ ಪ್ರಸಾದ ಮಾರುವವರ ಮೇಲೆ ನಿಗಾ ಇಡಬೇಕು. ಯಾರಾದರೂ ಅಹಿಂದೂಗಳು ಪ್ರಸಾದ ಮಾರುತ್ತಿರುವುದು ಕಂಡುಬಂದರೆ, ಅವರಿಗೆ ಹೊಡೆದು ಪೊಲೀಸರ ವಶಕ್ಕೆ ಒಪ್ಪಿಸಿ, ಎಂದು ಭಾಜಪ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಕರೆ ನೀಡಿದರು. ಅವರು ಇಲ್ಲಿ ವಿಶ್ವ ಹಿಂದೂ ಪರಿಷತ್ತಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಹಿಂದೂ ಭಕ್ತರು ಒಂದು ಗುಂಪು ರಚಿಸಿ ದೇವಸ್ಥಾನಗಳ ಆವರಣದಲ್ಲಿ ಪ್ರಸಾದ ಯಾರು ಮಾರುತ್ತಿದ್ದಾರೆ ಎಂಬುದನ್ನು ಪರಿಶೀಲಿಸಲು ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಒತ್ತಾಯಿಸಿದರು. ಹಾಗೂ, ‘ಭಕ್ತರು ಇಂತಹ ಮಾರಾಟಗಾರರಿಂದ ಪ್ರಸಾದ ಖರೀದಿಸಬಾರದು. ಅವರಿಗೆ ಅದನ್ನು ಮಾರಲು ಮತ್ತು ದೇವಸ್ಥಾನದೊಳಗೆ ಪ್ರವೇಶಿಸಲು ಅನುಮತಿ ನೀಡಬಾರದು’ ಎಂದು ಅವರು ಕರೆ ನೀಡಿದರು.
ಕುಟುಂಬದ ಸುರಕ್ಷತೆಗಾಗಿ ಮನೆಯಲ್ಲಿ ಶಸ್ತ್ರಾಸ್ತ್ರಗಳನ್ನು ಇಡಿ!
ನಿಮ್ಮ ಮನೆಯಲ್ಲಿ ಶಸ್ತ್ರಾಸ್ತ್ರಗಳನ್ನು ಇಡಿ. ಶತ್ರು ನಿಮ್ಮ ಮನೆಯ ಹೊಸ್ತಿಲನ್ನು ದಾಟಲು ಪ್ರಯತ್ನಿಸಿದರೆ, ಅವರಿಗೆ ಪಾಠ ಕಲಿಸಿ, ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು. ಪ್ರತಿಯೊಂದು ಮನೆಯಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿ ಮತ್ತು ಶಸ್ತ್ರಾಸ್ತ್ರಗಳನ್ನು ಇಡಲು ಕರೆ ನೀಡುವುದು, ಇದು ದುರ್ಗಾವಾಹಿನಿಯ (ಹಿಂದೂಗಳ ಒಂದು ಸಂಘಟನೆ) ಕೆಲಸವಾಗಿದೆ ಎಂದು ಹೇಳಿದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!