|

ನವ ದೆಹಲಿ – ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಕೆಮ್ಮಿನ ಔಷಧ ತೆಗೆದುಕೊಂಡ ನಂತರ ಒಂದೇ ದಿನದಲ್ಲಿ ೧೧ ಮಕ್ಕಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ೨ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ನೆಗಡಿಯ ಔಷಧಗಳನ್ನು ನೀಡಬಾರದು ಎಂದು ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಬರುವ ‘ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯ’ ಈ ಸೂಚನೆಯನ್ನು ನೀಡಿದೆ.
🚨 Cough syrup deaths
☠️ 11 children die within 24 hrs in MP & Rajasthan after consuming cough syrup
⚠️ Centre to States: No cough or cold medicines for children under 2 years
📌 DGHS: Not advised even below 5; if given, only under medical supervision, minimal dose & short… pic.twitter.com/UAJ7NqoU9t— Sanatan Prabhat (@SanatanPrabhat) October 5, 2025
ಮಹಾ ನಿರ್ದೇಶನಾಲಯವು ಮಾತು ಮುಂದುವರೆಸಿ, ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಗಳನ್ನು ಶಿಫಾರಸು ಮಾಡಲಾಗುವುದಿಲ್ಲ. ಒಂದು ವೇಳೆ ನೀಡಲೇಬೇಕಾದರೆ, ಅವುಗಳನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ, ಸರಿಯಾದ ಪ್ರಮಾಣದಲ್ಲಿ, ಹಾಗೂ ಅತಿ ಕಡಿಮೆ ಅವಧಿಗೆ ನೀಡಬೇಕು, ಎಂದು ಹೇಳಿದ್ದಾರೆ.
ಕೆಮ್ಮಿನ ಸಿರಪ್‌ನಲ್ಲಿ ‘ಡೈಥಿಲೀನ್ ಗ್ಲೈಕಾಲ್’ ಅಥವಾ ‘ಎಥಿಲೀನ್ ಗ್ಲೈಕಾಲ್’ ಇದ್ದರೆ, ಅವು ಮೂತ್ರಪಿಂಡಗಳಿಗೆ ಗಂಭೀರ ಹಾನಿ ಉಂಟುಮಾಡಬಹುದು ಎಂದು ಅಧ್ಯಯನಕಾರರ ಅಭಿಪ್ರಾಯವಾಗಿದೆ. ಆದಾಗ್ಯೂ, ಮಧ್ಯಪ್ರದೇಶದಲ್ಲಿ ಮೃತಪಟ್ಟ ಮಕ್ಕಳಿಗೆ ನೀಡಿದ ಸಿರಪ್‌ನಲ್ಲಿ ಈ ರಾಸಾಯನಿಕಗಳು ಕಂಡುಬಂದಿಲ್ಲ.
ಮಹಾರಾಷ್ಟ್ರದಲ್ಲಿ ೨೬ ಸಾವಿರದ ೯೩೫ ಲೀಟರ್ ಕಫ್ ಸಿರಪ್ ನಾಶ!
ಮಹಾರಾಷ್ಟ್ರದಲ್ಲಿ ಪೊಲೀಸರು ೨೬ ಸಾವಿರದ ೯೩೫ ಲೀಟರ್ ‘ಕೋಡಿನ್’ ರಾಸಾಯನಿಕಯುಕ್ತ ಕಫ್ ಸಿರಪ್ ಅನ್ನು ನಾಶಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗೆಯೇ, ತಮಿಳುನಾಡು ಸರಕಾರವು ‘ಕೋಲ್ಡ್ರಿಫ್ ಕಫ್ ಸಿರಪ್’ ಮಾರಾಟವನ್ನು ನಿಷೇಧಿಸಿದೆ. ಈ ಸಿರಪ್ ಬಾಟಲಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಆದೇಶ ನೀಡಲಾಗಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ