ಕೆಲವು ಭಾಗಗಳಲ್ಲಿ ಭೂಕುಸಿತ, ೧ ಸೇತುವೆಯೂ ಕುಸಿತ

ಡಾರ್ಜಿಲಿಂಗ್ (ಬಂಗಾಳ) – ಉತ್ತರ ಬಂಗಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಇಲ್ಲಿಯವರೆಗೆ ೯ ಜನರ ಜೀವವನ್ನು ತೆಗೆದುಕೊಂಡಿದೆ. ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಮತ್ತು ಸೇತುವೆ ಕುಸಿತದ ಘಟನೆಗಳಿಂದಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
೧. ಮಿರಿಕ್ ಮತ್ತು ಸುಖಿಯಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಹಲವು ಮನೆಗಳು ಕೊಚ್ಚಿಹೋಗಿವೆ ಮತ್ತು ರಸ್ತೆಗಳು ಮುಚ್ಚಿಹೋಗಿವೆ.
೨. ಕಾಲಿಂಪಾಂಗ್‌ನಲ್ಲಿ ನಿರಂತರ ಮಳೆಯಿಂದಾಗಿ ಅಲ್ಲಿನ ಹಲವು ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ.
೩. ದುಧಿಯಾ ಇಲ್ಲಿ ಕಬ್ಬಿಣದ ಸೇತುವೆಯ ಒಂದು ಭಾಗ ಕುಸಿದ ಕಾರಣ ‘ಸಿಲಿಗುರಿ-ಡಾರ್ಜಿಲಿಂಗ್ ರಾಜ್ಯ ಹೆದ್ದಾರಿ’ಯಲ್ಲಿ ವಾಹನ ಸಂಚಾರ ನಿಂತಿದೆ.
ಪ್ರಧಾನಮಂತ್ರಿ ಮೋದಿ ದುಃಖ ವ್ಯಕ್ತ !
Deeply pained by the loss of lives due to a bridge mishap in Darjeeling. Condolences to those who have lost their loved ones. May the injured recover soon.
The situation in Darjeeling and surrounding areas is being closely monitored in the wake of heavy rains and landslides. We…
— Narendra Modi (@narendramodi) October 5, 2025
‘ಡಾರ್ಜಿಲಿಂಗ್‌ನಲ್ಲಿನ ಸೇತುವೆ ದುರಂತದಲ್ಲಿ ಆದ ಜೀವಹಾನಿಯ ಬಗ್ಗೆ ನನಗೆ ತೀವ್ರ ದುಃಖವಾಗಿದೆ. ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪರಿಸ್ಥಿತಿಯ ಮೇಲೆ ಸೂಕ್ಷ್ಮವಾಗಿ ನಿಗಾ ಇಡಲಾಗಿದೆ. ಸಂತ್ರಸ್ತರಿಗೆ ಎಲ್ಲ ರೀತಿಯ ಸಹಾಯ ಮಾಡಲು ನಾವು ಬದ್ಧರಾಗಿದ್ದೇವೆ’ ಎಂಬ ಶಬ್ದಗಳಲ್ಲಿ ಪ್ರಧಾನಮಂತ್ರಿ ಮೋದಿ ಅವರು ‘ಎಕ್ಸ್’ (X) ನಲ್ಲಿನ ಪೋಸ್ಟ್ ಮೂಲಕ ದುಃಖ ವ್ಯಕ್ತಪಡಿಸಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!