ಈ ವೇಳೆ ಯುದ್ಧವಾದರೆ, ಭಾರತವು ತನ್ನದೇ ಯುದ್ಧ ವಿಮಾನಗಳ ಅವಶೇಷಗಳ ಅಡಿಯಲ್ಲಿ ಹೂತುಹೋಗುವುದು

ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹುರುಳಿಲ್ಲದ ಬೆದರಿಕೆ!

ಇಸ್ಲಾಮಾಬಾದ್ (ಪಾಕಿಸ್ತಾನ) – ಭಾರತೀಯ ನಾಯಕತ್ವವು ಅವರ ಕಳೆದುಕೊಂಡ ವಿಶ್ವಾಸಾರ್ಹತೆಯನ್ನು ಮರಳಿ ಪಡೆಯಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದೆ. ದೇಶೀಯ ಸವಾಲುಗಳಿಂದ ನಾಗರಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತವು ಉದ್ದೇಶಪೂರ್ವಕವಾಗಿ ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದೆ. ಈ ವೇಳೆ ಯುದ್ಧವಾದರೆ, ಭಾರತವು ತನ್ನದೇ ಯುದ್ಧ ವಿಮಾನಗಳ ಅವಶೇಷಗಳ ಅಡಿಯಲ್ಲಿ ಹೂತುಹೋಗುವುದು, ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡುವ ಮೂಲಕ ಪೊಳ್ಳು ಬೆದರಿಕೆ ಹಾಕಿದ್ದಾರೆ.

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯಿಸುವಾಗ ಖ್ವಾಜಾ ಆಸಿಫ್ ಅವರು ಈ ಪೋಸ್ಟ್ ಮಾಡಿದ್ದಾರೆ.

ಸಂಪಾದಕೀಯ ನಿಲುವು

‘ಆಪರೇಷನ್ ಸಿಂದೂರ್’ ಸಮಯದಲ್ಲಿ ಭಾರತವು ಪಾಕಿಸ್ತಾನದ ೯ ಮಿಲಿಟರಿ ನೆಲೆಗಳನ್ನು ನಾಶಪಡಿಸಿ ಅವರನ್ನು ಮಂಡಿಯೂರುವಂತೆ ಮಾಡಿದ ನಂತರವೂ ಪಾಕಿಸ್ತಾನೀಯರ ಗರ್ವ ಇಳಿದಿಲ್ಲ. ಹಾಗಾಗಿ ಈಗ ಭಾರತವು ಪಾಕಿಸ್ತಾನದ ವಿರುದ್ಧ ನಿರ್ಣಾಯಕ ಯುದ್ಧ ಮಾಡುವುದು ಅವಶ್ಯಕವಾಗಿದೆ!