
ವಾಷಿಂಗ್ಟನ್ (ಅಮೆರಿಕ) – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತದ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಬೆದರಿಕೆ ನೀಡಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಭಾರತ ನಿಲ್ಲಿಸದಿದ್ದರೆ, ದೊಡ್ಡ ತೆರಿಗೆಯನ್ನು ಎದುರಿಸಬೇಕಾಗಬಹುದು ಎಂದು ಟ್ರಂಪ್ ಇತ್ತೀಚೆಗೆ ಹೇಳಿದ್ದಾರೆ. ತಮ್ಮ ವಿದೇಶಿ ಪ್ರವಾಸಕ್ಕೆ ಬಳಸುವ ‘ಏರ್ ಫೋರ್ಸ್ ಒನ್’ ವಿಮಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದಾಗ ಅವರು ಈ ಹೇಳಿಕೆ ನೀಡಿದ್ದಾರೆ.
ಟ್ರಂಪ್ ಅವರು, “ಪ್ರಧಾನ ಮಂತ್ರಿ ಮೋದಿ ಅವರು ರಷ್ಯಾದಿಂದ ತೈಲ ಆಮದು ಮಾಡುವುದನ್ನು ನಿಲ್ಲಿಸುತ್ತೇನೆ ಎಂದು ನನಗೆ ಹೇಳಿದ್ದರು; ಆದರೆ ಅವರು ತೈಲ ತೆಗೆದುಕೊಳ್ಳುವುದನ್ನು ನಿಲ್ಲಿಸದಿದ್ದರೆ, ಅವರಿಗೆ ದೊಡ್ಡ ಪ್ರಮಾಣದ ಆಮದು ಸುಂಕವನ್ನು ವಿಧಿಸಲಾಗುವುದು.”ಎಂದು ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ಈ ಬಗ್ಗೆ ಚರ್ಚೆ ನಡೆದಿದೆ ಎಂಬ ಟ್ರಂಪ್ ಅವರ ಹೇಳಿಕೆಯನ್ನು ಭಾರತ ಸರಕಾರ ತಳ್ಳಿಹಾಕಿತ್ತು. (ನಂಬುವಂತೆ ಸುಳ್ಳು ಹೇಳಿ, ಎಂಬ ಮನೋವೃತ್ತಿಯ ಡೊನಾಲ್ಡ್ ಟ್ರಂಪ್! – ಸಂಪಾದಕರು)
ಅಕ್ಟೋಬರ್ 15 ರಂದು ವೈಟ್ ಹೌಸ್‌ನ ಓವಲ್ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದಾಗ, ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿರುವ ಬಗ್ಗೆ ಹೇಳಿಕೊಂಡಿದ್ದರು. ಭಾರತವು ರಷ್ಯಾದ ತೈಲ ಆಮದನ್ನು ಕ್ರಮೇಣ ನಿಲ್ಲಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆಂದು ಟ್ರಂಪ್ ತಿಳಿಸಿದ್ದರು. ಆದರೆ, ಮೋದಿ ಮತ್ತು ಟ್ರಂಪ್ ನಡುವೆ ಯಾವುದೇ ದೂರವಾಣಿ ಸಂಭಾಷಣೆ ನಡೆದಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. “ಭಾರತವು ತೈಲ ಮತ್ತು ನೈಸರ್ಗಿಕ ಅನಿಲದ ಒಂದು ಪ್ರಮುಖ ಆಮದುದಾರ ರಾಷ್ಟ್ರವಾಗಿದೆ. ಅಸ್ಥಿರ ಇಂಧನ ಪರಿಸ್ಥಿತಿಯಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಸರಕಾರದ ಆದ್ಯತೆಯಾಗಿದೆ,” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ತಿಳಿಸಿದ್ದರು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು