ಜಿನೇವಾ (ಸ್ವಿಟ್ಜರ್ಲೆಂಡ್) ಅಂತರ-ಸಂಸದೀಯ ಒಕ್ಕೂಟದ ಸಭೆಯಲ್ಲಿ ಪಾಕಿಸ್ತಾನವನ್ನು ತಿವಿದ ಭಾರತ!

ಜಿನೇವಾ (ಸ್ವಿಟ್ಜರ್ಲೆಂಡ್) – ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯ ಮೂಲಕ ಜಮ್ಮು-ಕಾಶ್ಮೀರವನ್ನು ಅಸ್ಥಿರಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ ಮತ್ತು ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಭಾರತವು ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದೆ. ಇಲ್ಲಿ ನಡೆದ ಅಂತರ-ಸಂಸದೀಯ ಒಕ್ಕೂಟದ (‘ಇಂಟರ್ ಪಾರ್ಲಿಮೆಂಟ್ ಯೂನಿಯನ್’) ಸಭೆಯಲ್ಲಿ ಪಾಕಿಸ್ತಾನದ ಪ್ರತಿನಿಧಿಯು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದಾಗ, ಭಾರತದ ಸಂಸದೆ ಅಪರಾಜಿತಾ ಸಾರಂಗಿ ಅವರು ಈ ಪ್ರತ್ಯುತ್ತರ ನೀಡಿದರು.
ಸಂಸದೆ ಸಾರಂಗಿ ಅವರು,
1. ಈ ಸಭೆಯ ವ್ಯಾಪ್ತಿಗೆ ಬರದ ರಾಜಕೀಯ ವಿಷಯಗಳನ್ನು ಈ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರಸ್ತಾಪಿಸುವ ಪಾಕಿಸ್ತಾನವನ್ನು ನಾವು ಖಂಡಿಸುತ್ತೇವೆ. ಅವರ ಉದ್ದೇಶ ಕೇವಲ ಸುಳ್ಳು ಪ್ರಚಾರ ಮಾಡುವುದು ಮತ್ತು ಭಾರತದ ವರ್ಚಸ್ಸನ್ನು ಹಾಳುಮಾಡುವುದು ಆಗಿದೆ.
2. ಜಮ್ಮು-ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಪಾಕಿಸ್ತಾನವು ತನ್ನ ಅಕ್ರಮ ನಿಯಂತ್ರಣದಲ್ಲಿರುವ ಪ್ರದೇಶವನ್ನು ತಕ್ಷಣವೇ ತೆರವುಗೊಳಿಸಬೇಕು. ಜಮ್ಮು-ಕಾಶ್ಮೀರವು ಭಾರತದ್ದಾಗಿತ್ತು, ಭಾರತದ್ದಾಗಿದೆ ಮತ್ತು ಯಾವಾಗಲೂ ಭಾರತದ್ದೇ ಆಗಿರುತ್ತದೆ. ಪಾಕಿಸ್ತಾನವು ಈಗ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕು.
3. ಪಾಕಿಸ್ತಾನವು ಮೊದಲು ತನ್ನ ದೇಶದ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು. ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ.
4. ಪಾಕಿಸ್ತಾನವು ಭಾರತದ ಮೇಲೆ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡುತ್ತಿದೆ; ಆದರೆ ನಿಜವಾದ ಸಂಗತಿಯೆಂದರೆ, ಗಡಿಯಾಚೆಗಿನ ಭಯೋತ್ಪಾದನೆಯ ಮೂಲವೇ ಆ ದೇಶದಲ್ಲಿದೆ. ಭಾರತವು ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.
5. ಪಾಕಿಸ್ತಾನವು ನಿರಂತರವಾಗಿ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ಕಾರಣದಿಂದಾಗಿ ಭಾರತವು ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸಿದೆ. ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಸಾಗಲು ಸಾಧ್ಯವಿಲ್ಲ.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
‘ಲವ್ ಜಿಹಾದ್’ನ ಅಂತರರಾಷ್ಟ್ರೀಯ ಪಿತೂರಿ ಪ್ರಕರಣ: 14 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!