ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತಿವಿದಿದೆ!

ನ್ಯೂಯಾರ್ಕ್ (ಅಮೇರಿಕಾ) – ಪಾಕಿಸ್ತಾನವು ತನ್ನ ಅಕ್ರಮ ವಶದಲ್ಲಿರುವ ಪ್ರದೇಶಗಳಲ್ಲಿ (ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ) ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ನಾವು ಪಾಕಿಸ್ತಾನಕ್ಕೆ ಕರೆ ನೀಡುತ್ತೇವೆ. ಅಲ್ಲಿನ ಜನರು ಪಾಕಿಸ್ತಾನಿ ಸೈನ್ಯದ ನಿಯಂತ್ರಣ, ದಬ್ಬಾಳಿಕೆ ಮತ್ತು ಕ್ರೂರತೆಯ ವಿರುದ್ಧ ಬಹಿರಂಗವಾಗಿ ದಂಗೆ ಏಳುತ್ತಿದ್ದಾರೆ, ಎಂದು ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಹೇಳಿದೆ. ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತವು ಪಾಕಿಸ್ತಾನಕ್ಕೆ ತಿವಿದಿದೆ.

ಇಲ್ಲಿನ ಭಾರತದ ಖಾಯಂ ಪ್ರತಿನಿಧಿ ಪಿ. ಹರೀಶ ಅವರು, ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಇದೆ ಮತ್ತು ಶಾಶ್ವತವಾಗಿ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದ ಜನರು ಭಾರತದ ಪ್ರಜಾಪ್ರಭುತ್ವದ ಸಂಪ್ರದಾಯಗಳು ಮತ್ತು ಸಾಂವಿಧಾನಿಕ ಚೌಕಟ್ಟಿನೊಳಗೆ ಮೂಲಭೂತ ಹಕ್ಕುಗಳನ್ನು ಬಳಸುತ್ತಾರೆ. ಈ ಪರಿಕಲ್ಪನೆಗಳು ಪಾಕಿಸ್ತಾನಕ್ಕೆ ಪರಕೀಯವಾಗಿವೆ, ಎಂದು ಹರೀಶ ಲೇವಡಿ ಮಾಡಿದರು.
| ಸಂಪಾದಕೀಯ ನಿಲುವು
ಪಾಕಿಸ್ತಾನಕ್ಕೆ ಮಾತಿನಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಅದು ತೂತು ಇರುವ ಕೊಡದ ಮೇಲೆ ನೀರು ಸುರಿದಂತೆ. ಪಾಕಿಸ್ತಾನಕ್ಕೆ ಅರ್ಥವಾಗುವ ಭಾಷೆಯಲ್ಲಿ ಹೇಳುವ ಅಗತ್ಯವಿದೆ! |
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಪಾಕ್ ಸೈನಿಕರಿಂದ ಗುಂಡಿನ ದಾಳಿ : ೧೨ ಸಾವು, ೩೮ ಜನರಿಗೆ ಗಾಯ : POK Protest
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump