ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನಕ್ಕೆ ಅನುಮತಿ ನಿರಾಕರಣೆ ಪ್ರಕರಣ

ಬೆಂಗಳೂರು – ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಲಬುರಗಿ (ಗುಲ್ಬರ್ಗ) ವಿಧಾನಸಭಾ ಕ್ಷೇತ್ರದ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಪ್ರಕರಣದ ವಿಚಾರಣೆ ಇತ್ತೀಚೆಗೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ನಡೆಯಿತು. ಈ ವಿಚಾರಣೆಯಲ್ಲಿ ನ್ಯಾಯಾಲಯವು ಎರಡೂ ಪಕ್ಷಗಳಿಗೆ, ‘ಈ ವಿಷಯವನ್ನು ಹೆಚ್ಚು ಕಾಲ ಎಳೆಯುವುದು ಸರಿಯಲ್ಲ. ಇದರ ಮೇಲೆ ಸಾಧ್ಯವಾದಷ್ಟು ಬೇಗ ಪರಿಹಾರ ಕಂಡುಕೊಳ್ಳಿ,’ ಎಂದು ಸಲಹೆ ನೀಡಿತು. ಅಲ್ಲದೆ, ‘ಶೀಘ್ರದಲ್ಲೇ ಶಾಂತಿ ಸಭೆ ನಡೆಸಿ ಅದರ ಮಾಹಿತಿಯನ್ನು ಅರ್ಜಿದಾರರಿಗೆ ತಿಳಿಸಬೇಕು,’ ಎಂದು ಉಚ್ಚ ನ್ಯಾಯಾಲಯವು ಸರಕಾರಕ್ಕೆ ನಿರ್ದೇಶನ ನೀಡಿತು ಮತ್ತು ವಿಚಾರಣೆಯನ್ನು ಅಕ್ಟೋಬರ್ 30ರ ವರೆಗೆ ಮುಂದೂಡಿತು.
ಸಂಘದ ಸ್ಥಾಪನೆಯ 100ನೇ ವರ್ಷಾಚರಣೆ ಪ್ರಯುಕ್ತ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಕಲಬುರಗಿ ಜಿಲ್ಲಾ ಸಂಘ ಸಂಚಾಲಕ ಅಶೋಕ ಪಾಟೀಲ್ ಅವರು ಸ್ಥಳೀಯ ಆಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಅದೇ ದಿನ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ಸ್‌ನಂತಹ ಇತರ ಸಂಘಟನೆಗಳು ಸಹ ಮೆರವಣಿಗೆಗೆ ಅನುಮತಿ ಕೇಳಿದ್ದವು. ಇದರಿಂದಾಗಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಚಿತ್ತಾಪುರದ ತಹಶೀಲ್ದಾರರು ಸಂಘದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿ ಅಶೋಕ ಪಾಟೀಲ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!