ಭಾಜಪದಿಂದ ಅಮಾನತುಗೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ

ಬೆಂಗಳೂರು – ರಾಜ್ಯದಲ್ಲಿ ‘ಹಲಾಲ್ ಪ್ರಮಾಣಪತ್ರ’ವನ್ನು ನಿಷೇಧಿಸಬೇಕು ಎಂದು ಭಾಜಪದಿಂದ ಅಮಾನತುಗೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ಪತ್ರದಲ್ಲಿ ಅವರು,
೧. ರಾಜ್ಯದಲ್ಲಿ ಹಲಾಲ್ ಪ್ರಮಾಣಪತ್ರದ ಮೂಲಕ ಕೆಲವು ಸಂಘಟನೆಗಳು ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ. ಆದ್ದರಿಂದ ಹಲಾಲ್ ಪ್ರಮಾಣಪತ್ರ ಮತ್ತು ಅದನ್ನು ನೀಡುವ ಸಂಸ್ಥೆಗಳನ್ನು ನಿಷೇಧಿಸಬೇಕು.
೨. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ, ಉತ್ತರಪ್ರದೇಶ ಸರಕಾರವು ಅಂತಹ ಎಲ್ಲಾ ಸಂಸ್ಥೆಗಳನ್ನು ನಿಷೇಧಿಸಲು ನಿರ್ಧರಿಸಿದೆ. ಅದೇ ಮಾದರಿಯಲ್ಲಿ, ಹಲಾಲ್ ಪ್ರಮಾಣೀಕರಣ ಸಂಸ್ಥೆಗಳಿಂದ ಹಲಾಲ್ ನಿಧಿಯ ದುರುಪಯೋಗ ಮತ್ತು ಅವುಗಳ ಕಾರ್ಯಾಚರಣೆಯನ್ನು ನಿಷೇಧಿಸುವ ತುರ್ತು ಅಗತ್ಯದತ್ತ ನಿಮ್ಮ ಗಮನ ಸೆಳೆಯಲು ನಾನು ಬಯಸುತ್ತೇನೆ.
೩. ನವೆಂಬರ್ ೨೦೨೩ ರಲ್ಲಿ, ಹಲಾಲ್ ಪ್ರಮಾಣೀಕರಣ ಸಂಸ್ಥೆಗಳ ಮೇಲೆ ನಿಷೇಧ ಹೇರುವಂತೆ ಆಗ್ರಹಿಸಿ ನಾನು ಭಾರತ ಸರಕಾರದ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದೆ.
೪. ಧಾರ್ಮಿಕ ಸಂಸ್ಥೆಗಳ ಹೆಸರಿನಲ್ಲಿ, ಅನೇಕ ಇಸ್ಲಾಮಿಕ್ ಸಂಸ್ಥೆಗಳು ಮಾಂಸ ಉತ್ಪಾದನೆ, ಆಹಾರ ಉತ್ಪನ್ನಗಳು, ಸೌಂದರ್ಯವರ್ಧಕಗಳು ಮತ್ತು ಇತರ ಗ್ರಾಹಕ ವಸ್ತುಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ‘ಹಲಾಲ್’ ಪ್ರಮಾಣೀಕರಣಗಳನ್ನು ಸಕ್ರಿಯವಾಗಿ ಉತ್ತೇಜಿಸುತ್ತಿವೆ. ಅಂತಹ ಸಂಸ್ಥೆಗಳ ಪ್ರಮುಖ ಉದಾಹರಣೆಗಳಲ್ಲಿ ಹಲಾಲ್ ಇಂಡಿಯಾ, ಜಮಿಯತ್ ಉಲೇಮಾ-ಎ-ಹಿಂದ್ ಹಲಾಲ್ ಟ್ರಸ್ಟ್, ಗ್ಲೋಬಲ್ ಇಸ್ಲಾಮಿಕ್ ಶರಿಯಾ, ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಲಾಲ್ ಸರ್ಟಿಫಿಕೇಶನ್ ಸರ್ವಿಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಜಮಿಯತ್ ಉಲೇಮಾ-ಎ-ಮಹಾರಾಷ್ಟ್ರ ಸೇರಿವೆ.
೫. ಈ ಪ್ರಮಾಣೀಕರಣಗಳ ಮೂಲಕ ಸಂಗ್ರಹಿಸಲಾದ ದೊಡ್ಡ ಮೊತ್ತದ ಹಣವನ್ನು ರಾಷ್ಟ್ರವಿರೋಧಿ ಚಟುವಟಿಕೆಗಳು, ಭಯೋತ್ಪಾದನೆಗೆ ಬೆಂಬಲ, ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳಿಗೆ ಕಾನೂನು ನೆರವು ಮತ್ತು ಭಯೋತ್ಪಾದನೆ ಮತ್ತು ಜಿಹಾದ್‌ಗೆ ಬೆಂಬಲ ನೀಡುವ ಸಾಹಿತ್ಯದ ಪ್ರಚಾರಕ್ಕಾಗಿ ಬಳಸಲಾಗುತ್ತಿದೆ ಎಂಬುದಕ್ಕೆ ಪುರಾವೆಗಳಿವೆ ಎಂದು ಹೇಳಿದರು.
ಸಂಪಾದಕೀಯ ನಿಲುವುಮೂಲತಃ ಇಂತಹ ಬೇಡಿಕೆ ಏಕೆ ಮಾಡಬೇಕಾಗುತ್ತದೆ? ಸರಕಾರವು ದೇಶಾದ್ಯಂತ ಹಲಾಲ್ ಪ್ರಮಾಣಪತ್ರಗಳನ್ನು ನಿಷೇಧಿಸಬೇಕಿತ್ತು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!