ನಟ ಸಲ್ಮಾನ್ ಖಾನ್‌ರನ್ನು ಪಾಕಿಸ್ತಾನವು ‘ಭಯೋತ್ಪಾದಕ’ ಎಂದು ಘೋಷಿಸಿದೆ ಎಂಬ ಸುಳ್ಳು ಸುದ್ದಿ ಪ್ರಸಾರ

ಇಸ್ಲಾಮಾಬಾದ್ (ಪಾಕಿಸ್ತಾನ) – ನಟ ಸಲ್ಮಾನ್ ಖಾನ್ ಅವರು ಸೌದಿ ಅರೇಬಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಲೂಚಿಸ್ತಾನ ಮತ್ತು ಪಾಕಿಸ್ತಾನವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದರು. ಈ ವಿಷಯವಾಗಿ ಪಾಕಿಸ್ತಾನವು ಖಾನ್ ಅವರನ್ನು ‘ಭಯೋತ್ಪಾದಕ’ ಎಂದು ಘೋಷಿಸಿದೆ ಎಂಬ ಸುಳ್ಳು ಸುದ್ದಿ ಪ್ರಸಾರವಾಗಿದೆ.
೧. ಸಧ್ಯದ ಈ ಸಮಯದಲ್ಲಿ ನೀವು ಒಂದು ಹಿಂದಿ ಚಲನಚಿತ್ರವನ್ನು ನಿರ್ಮಿಸಿ, ‘ಅದನ್ನು ಇಲ್ಲಿ (ಸೌದಿ ಅರೇಬಿಯಾದಲ್ಲಿ) ಪ್ರದರ್ಶಿಸಿದರೆ, ಅದು ಜನಪ್ರಿಯ (ಸೂಪರ್‌ಹಿಟ್) ಆಗುವುದು, ಅದು ನೂರಾರು ಕೋಟಿ ಹಣಗಳಿಸುತ್ತದೆ; ಏಕೆಂದರೆ ಇತರ ದೇಶಗಳಿಂದ ವಿವಿಧ ಭಾಷೆಗಳ ಜನರು ಇಲ್ಲಿ ದೊಡ್ಡ ಪ್ರಮಾಣದಲ್ಲಿ ಬಂದಿದ್ದಾರೆ. ಬಲೂಚಿಸ್ತಾನದ ಜನರಿದ್ದಾರೆ, ಅಫ್ಘಾನಿಸ್ತಾನದವರಿದ್ದಾರೆ, ಪಾಕಿಸ್ತಾನದ ಜನರಿದ್ದಾರೆ. ಪ್ರತಿಯೊಬ್ಬರೂ ಇಲ್ಲಿ ಕೆಲಸಕ್ಕಾಗಿ ಬರುತ್ತಾರೆ’, ಎಂದು ಸಲ್ಮಾನ್ ಖಾನ್ ಹೇಳಿದ್ದರು.
೨. ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕವಾಗಿ ಉಲ್ಲೇಖಿಸಿದ್ದರಿಂದ ಪಾಕಿಸ್ತಾನದಲ್ಲಿ ಆಕ್ರೋಶದ ಅಲೆ ಎದ್ದಿದೆ, ಆದರೆ ಬಲೂಚಿಸ್ತಾನದ ಪ್ರತ್ಯೇಕತಾವಾದಿ ನಾಯಕರು ಸಲ್ಮಾನ್ ಖಾನ್ ಅವರ ಹೇಳಿಕೆಯನ್ನು ಶ್ಲಾಘಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation