
ಸಿಂಹಭೂಮ್ (ಜಾರ್ಖಂಡ್) – ಇಲ್ಲಿನ ದೇವಂಬೀರ್ ಗ್ರಾಮದಲ್ಲಿ ಅಕ್ಟೋಬರ್ 24ರ ರಾತ್ರಿ, ಒಬ್ಬ ವ್ಯಕ್ತಿಯ ಮೇಲೆ ಅತ್ಯಾಚಾರದ ಶಂಕೆ ವ್ಯಕ್ತಪಡಿಸಿ ಗ್ರಾಮಸ್ಥರು ಆತನಿಗೆ ಚಪ್ಪಲಿ ಹಾರ ಹಾಕಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿ ಅಮಾನವೀಯವಾಗಿ ಥಳಿಸಿದ್ದಾರೆ. ಈ ಹಲ್ಲೆಯಿಂದಾಗಿ ಆ ವ್ಯಕ್ತಿ ಮೃತಪಟ್ಟಿದ್ದಾನೆ. ಘಟನೆಯ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೃತ ವ್ಯಕ್ತಿಯ ಹೆಸರು ಸೈಮನ್ ತಿರ್ಕಿ ಎಂದಾಗಿದೆ. ತಡರಾತ್ರಿ ಶೌಚಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದಾಗ ಕೆಲ ಗ್ರಾಮಸ್ಥರು ಆತನನ್ನು ಹಿಡಿದಿದ್ದಾರೆ. ಗ್ರಾಮದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಆತನ ಮೇಲಿತ್ತು. ಗ್ರಾಮಸ್ಥರು ಆತನಿಗೆ ಚಪ್ಪಲಿ ಹಾರ ಹಾಕಿ, ನಗ್ನ ಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಇದರ ನಂತರ ಆತನನ್ನು ಒಂದು ಮನೆಯೊಳಗೆ ಕೂಡಿಹಾಕಿ ಕೋಲುಗಳಿಂದ ಥಳಿಸಲಾಗಿದೆ. ಮರುದಿನ ಬೆಳಿಗ್ಗೆ ಕೋಣೆಯ ಬಾಗಿಲು ತೆರೆದಾಗ, ಆತ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಯಿಬಾಸಾ ಜಿಲ್ಲಾ ಆಸ್ಪತ್ರೆಗೆ ಶವ ಪರೀಕ್ಷೆಗಾಗಿ ಕಳುಹಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ