ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮುಖ್ಯ ನ್ಯಾಯಾಧೀಶರಾಗಿ ಸೂರ್ಯಕಾಂತ್ ಆಯ್ಕೆ ! Justice Surya Kant

ನೂತನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಹಾಲಿ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ

ನವದೆಹಲಿ – ಭಾರತದ ಹಾಲಿ ಮುಖ್ಯ ನ್ಯಾಯಾಧೀಶ ಭೂಷಣ್ ಗವಾಯಿ ಅವರು ನವೆಂಬರ್ ೨೩ ರಂದು ನಿವೃತ್ತರಾಗುತ್ತಿದ್ದಾರೆ. ಅವರು ತಮ್ಮ ಉತ್ತರಾಧಿಕಾರಿಯಾಗಿ ಸರ್ವೋಚ್ಚ ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಮೂರ್ತಿ ಸೂರ್ಯಕಾಂತ್ (ವಯಸ್ಸು ೬೩ ವರ್ಷಗಳು) ಅವರ ಹೆಸರನ್ನು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.

ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನವೆಂಬರ್ ೨೩ ರಂದು ಮುಖ್ಯ ನ್ಯಾಯಾಧೀಶರ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಅವರ ಅಧಿಕಾರಾವಧಿಯು ಫೆಬ್ರವರಿ ೯, ೨೦೨೭ ರವರೆಗೆ, ಅಂದರೆ ೧೪ ತಿಂಗಳುಗಳ ಕಾಲ ಇರಲಿದೆ. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ೬೫ ವರ್ಷಗಳು. ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ಜನಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮಧ್ಯಮ ವರ್ಗದ ಕುಟುಂಬದಿಂದ ಬಂದವರು.