ಕೇಂದ್ರ ಸರಕಾರದ 8ನೇ ವೇತನ ಆಯೋಗಕ್ಕೆ ಅನುಮೋದನೆ 8th Pay Commission

ಜನವರಿ 1, 2026 ರಿಂದ ಜಾರಿಗೆ ಬರುವ ಸಾಧ್ಯತೆ

ನವದೆಹಲಿ – ಕೇಂದ್ರ ಸರಕಾರ 8 ನೇ ವೇತನ ಆಯೋಗಕ್ಕೆ ಅನುಮೋದನೆ ಸಿಕ್ಕಿದೆ. ಈ ಕುರಿತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾದ ಶ್ರೀ. ಅಶ್ವಿನಿ ವೈಷ್ಣವ್ ಅವರು, ವೇತನ ಆಯೋಗವು 18 ತಿಂಗಳೊಳಗೆ ತನ್ನ ಶಿಫಾರಸುಗಳನ್ನು ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ. ಈ ಶಿಫಾರಸುಗಳು ಜನವರಿ 1, 2026 ರಿಂದ ಜಾರಿಗೆ ಬರುವ ನಿರೀಕ್ಷೆಯಿದೆ.

ಆಯೋಗವು ಕೇಂದ್ರ ಸರಕಾರದ ನೌಕರರು ಮತ್ತು ಪಿಂಚಣಿದಾರರ ವೇತನ ಮತ್ತು ಭತ್ಯೆಗಳ ಪರಿಶೀಲನೆಯನ್ನು ಕೈಗೊಳ್ಳಲಿದೆ. ಈ ವೇತನ ಆಯೋಗದಿಂದ 50 ಲಕ್ಷ ಕೇಂದ್ರ ಸರಕಾರಿ ನೌಕರರು ಮತ್ತು 69 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ.