ಸರಕಾರದಿಂದ ಅಧಿಸೂಚನೆ ಪ್ರಕಟ

ಗುವಾಹಟಿ (ಆಸ್ಸಾಂ) – ಆಸ್ಸಾಂ ಸರಕಾರ ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, ಇನ್ನು ಮುಂದೆ ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ವಿವಾಹಗಳನ್ನು ಮಾಡಿಕೊಳ್ಳುವುದು ಕಾನೂನುಬಾಹಿರ ಅಪರಾಧವಾಗಲಿದೆ. ಈ ಹೊಸ ಕಾನೂನಿನ ಅಡಿಯಲ್ಲಿ, ಎರಡನೇ ಮದುವೆಯಾದರೆ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು. ಈ ಕಾನೂನು ಎಲ್ಲಾ ಧರ್ಮಗಳ ನಾಗರಿಕರಿಗೆ ಸಮಾನವಾಗಿ ಅನ್ವಯವಾಗುತ್ತದೆ. ಈ ಕುರಿತು ಮಸೂದೆಯನ್ನು ನವೆಂಬರ್ 25 ರಂದು ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು.
🚨 Assam Leads the Way!
CM Himanta Biswa Sarma’s bold reforms👇
⚖️ Minimum 7-year jail for polygamy🚫 Govt schemes barred for those with over 2 children
👮♂️ 8,000+ arrests in child marriage crackdown in 2 years
If BJP-ruled Assam can do this, why not the rest of the country?… pic.twitter.com/apeUkoLmty
— Sanatan Prabhat (@SanatanPrabhat) October 28, 2025
ಬಾಲ್ಯವಿವಾಹ ಪ್ರಕರಣ; 2 ವರ್ಷಗಳಲ್ಲಿ 8 ಸಾವಿರಕ್ಕೂ ಹೆಚ್ಚು ಜನರ ಬಂಧನ.
ಈ ಕುರಿತು ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ಮಾತನಾಡಿ, ಆಸ್ಸಾಂನಲ್ಲಿ ಎರಡನೇ ಅಥವಾ ಮೂರನೇ ಮದುವೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ನಾವು ಮಹಿಳೆಯರ ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕೊನೆಯವರೆಗೂ ಕಾಪಾಡುತ್ತೇವೆ. ಈ ಕಾನೂನು ಮಹಿಳೆಯರನ್ನು ಸಬಲೀಕರಣಗೊಳಿಸುವ ನಮ್ಮ ಪ್ರಯತ್ನಗಳಿಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಬಾಲ್ಯವಿವಾಹದ ವಿರುದ್ಧ ನಾವು ಈಗಾಗಲೇ ಕಠಿಣ ಕ್ರಮ ಕೈಗೊಂಡಿದ್ದು, ಕಳೆದ 2 ವರ್ಷಗಳಲ್ಲಿ 8 ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಬಹುಪತ್ನಿತ್ವ ವಿರೋಧಿ ಕಾನೂನು ಸಮಾಜದ ಇಂತಹ ಕೆಟ್ಟ ಪದ್ಧತಿಗಳ ವಿರುದ್ಧ ಹೋರಾಡಲು ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದರು.
ಎರಡು ಮಕ್ಕಳ ನೀತಿಯ ಘೋಷಣೆ
ಕಚಾರ್ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಸರಮಾ ಅವರು ಮಾತನಾಡಿ, ಯಾರು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುತ್ತಾರೋ ಅಂತಹ ಮಹಿಳೆಯರಿಗೆ ಸರಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನಗಳು ಸಿಗುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಮಹಿಳಾ ಉದ್ಯಮಶೀಲತಾ ಅಭಿಯಾನ ಕೂಡ ಈ ಯೋಜನೆಗಳಲ್ಲಿ ಸೇರಿದ್ದು, ಮಹಿಳೆಯರಿಗೆ ಸ್ವ-ಸಹಾಯ ಗುಂಪುಗಳ ಮೂಲಕ 25 ಸಾವಿರ ರೂಪಾಯಿಗಳವರೆಗೆ ಸಾಲ ನೀಡಲಾಗುತ್ತದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!